ನವದೆಹಲಿ: ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ತಂದು ಕೊಟ್ಟ ಜಾವೆಲಿನ್ ಥ್ರೋ ಸ್ಪರ್ಧಿ ನೀರಜ್ ಚೋಪ್ರಾ ತಮ್ಮ 'ಚಿಕ್ಕ ಕನಸೊಂದನ್ನು' ನನಸಾಗಿಸಿಕೊಂಡಿದ್ದಾರೆ. ಈ ಕುರಿತು ಅವರೇ ಟ್ವಿಟರ್ನಲ್ಲಿ ಸಂತಸವನ್ನು ಹಂಚಿಕೊಂಡಿದ್ದಾರೆ.
ಹೌದು.. ನೀರಜ್ ಚೋಪ್ರಾ ಇದೇ ಮೊದಲ ಬಾರಿಗೆ ತನ್ನ ತಂದೆ-ತಾಯಿಯನ್ನು ವಿಮಾನದಲ್ಲಿ ಕರೆದೊಯ್ಯಿದ್ದು, 'ನನ್ನ ತಂದೆ, ತಾಯಿಯನ್ನು ವಿಮಾನದಲ್ಲಿ ಕರೆದೊಯ್ಯುವ ಸಣ್ಣ ಕನಸು ಇಂದು ನನಸಾಗಿದೆ' ಎಂದಿದ್ದಾರೆ. ಜೊತೆಗೆ ಎಲ್ಲರ ಹಾರೈಕೆಗೆ ಧನ್ಯವಾದಗಳು ಎಂದಿದ್ದಾರೆ.