ಹೈದರಾಬಾದ್ :ಮುಂದಿನ ತಿಂಗಳಿಂದ ಸಾಲು ಸಾಲು ಹಬ್ಬಗಳು ಬರಲಿವೆ. ಈ ವೇಳೆ ಕೂಡ ಬಂಗಾರದ ಬೆಲೆಯಲ್ಲಿ ಇಳಿಕೆ ಅಥವಾ ಯಥಾಸ್ಥಿತಿ ಕಂಡು ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಚಿನ್ನದ ದರ ಕಡಿಮೆಯಾದರೆ ಗ್ರಾಹಕರು ಖರೀದಿ ಮಾಡಲು ಹೆಚ್ಚು ಆಸಕ್ತಿ ತೋರುವ ಸಾಧ್ಯತೆ ಇದೆ ಎನ್ನಲಾಗಿದೆ.
ದೇಶದಲ್ಲಿ ಇಂದು ಕೂಡ ಚಿನ್ನದ ಬೆಲೆ ಸ್ಥಿರವಾಗಿದೆ. ಮುಂಬರುವ ಹಬ್ಬದ ಸೀಸನ್ಗಳಲ್ಲೂ ಇದೇ ರೀತಿಯ ಬೆಳವಣಿಗೆ ಕಂಡು ಬರುವ ಸಾಧ್ಯತೆ ಇದೆ. ಪ್ರಮುಖವಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಹಳದಿ ಲೋಹದ ಖರೀದಿಯಲ್ಲಿ ಹಾಗೂ ಅದರ ಮೇಲೆ ಹೂಡಿಕೆ ಮಾಡಲು ಹೆಚ್ಚಿನ ಆಸಕ್ತಿ ತೋರಿಸದ ಕಾರಣ ಈ ಬೆಳವಣಿಗೆ ಆಗಬಹುದು ಎನ್ನಲಾಗಿದೆ.