ಜೈಪುರ (ರಾಜಸ್ಥಾನ) :ಜೈಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರದಂದು ಪೇಸ್ಟ್ ರೂಪದಲ್ಲಿದ್ದ ಅಕ್ರಮ ಸಾಗಣೆ ಮಾಡುತ್ತಿದ್ದ 791 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಶಾರ್ಜಾದಿಂದ ಏರ್ ಅರೇಬಿಯಾ ವಿಮಾನದ ಮೂಲಕ ಜೈಪುರಕ್ಕೆ ಆಗಮಿಸಿದ್ದ ಪ್ರಯಾಣಿಕನ ಮಾಹಿತಿ ಪ್ರಕಾರ ಈ ಚಿನ್ನದ ಪ್ರಸ್ತುತ ಮಾರುಕಟ್ಟೆ ಮೌಲ್ಯ 42,79,310 ರೂ. ಇದೆ. ಚಿನ್ನವನ್ನು ಮೂರು ಕ್ಯಾಪ್ಸುಲ್‌ಗಳಲ್ಲಿ ಪೇಸ್ಟ್ ರೂಪದಲ್ಲಿ ಸಾಗಿಸಲಾಗುತ್ತಿತ್ತು.
ಗುದನಾಳದಲ್ಲಿ ಚಿನ್ನ ಸಾಗಾಟ.. ಜೈಪುರ ವಿಮಾನ ನಿಲ್ದಾಣದಲ್ಲಿ 791ಗ್ರಾಂ ಬಂಗಾರ ಅಧಿಕಾರಿಗಳ ವಶಕ್ಕೆ! - gold smuggling
ಜೈಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನಿಂದ 791 ಗ್ರಾಂ ಅಕ್ರಮ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ..
ಅಕ್ರಮ ಚಿನ್ನ ಸಾಗಾಟ ಪ್ರಕರಣ
ಇದನ್ನೂ ಓದಿ:90ನೇ ವಯಸ್ಸಿನಲ್ಲಿ ಬ್ಯುಸಿನೆಸ್ ಆರಂಭಿಸಿದ ವೃದ್ಧೆ, ತಿಂಗಳಿಗೆ ಲಕ್ಷಗಟ್ಟಲೆ ಸಂಪಾದನೆ
ಬೆಳಿಗ್ಗೆ 5:15ಕ್ಕೆ ಜೈಪುರ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ತಡೆದು ಪರಿಶೀಲಿಸಿದ್ದಾರೆ. ಗುದನಾಳದೊಳಗೆ ಕ್ಯಾಪ್ಸುಲ್‌ಗಳಲ್ಲಿ ಇಟ್ಟ ಪೇಸ್ಟ್ ರೂಪದ ಚಿನ್ನವನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಚಿನ್ನ ಸಹಿತ ಪ್ರಯಾಣಿಕನನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಈ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.