ಶ್ರೀನಗರ (ಜಮ್ಮು ಕಾಶ್ಮೀರ):ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಕಾಶ್ಮೀರದಲ್ಲಿ ಮತ್ತೆ 4ಜಿ ಅಂತರ್ಜಾಲ ಸೇವೆಗಳನ್ನು ಪುನರ್ ಸ್ಥಾಪನೆ ಮಾಡಲು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಗುರುವಾರ ಹೇಳಿದ್ದಾರೆ.
ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿದ ಮನೋಜ್ ಸಿನ್ಹಾ, ಇಲ್ಲಿ 4ಜಿ ಸೇವೆಗಳನ್ನು ಮತ್ತೆ ಆರಂಭಿಸಲು ಸಮಿತಿ ಪರಿಶೀಲನೆ ನಡೆಸುತ್ತಿದೆ. ಪ್ರಸ್ತುತ, ಉಧಾಂಪುರ್ ಮತ್ತು ಗಂದೇರ್ಬಾಲ್ ಸೇರಿದಂತೆ ಎರಡು ಜಿಲ್ಲೆಗಳಲ್ಲಿ ಮಾತ್ರ 4ಜಿ ಇಂಟರ್ನೆಟ್ ಸೇವೆಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಜೀವಿಸುವ ಹಕ್ಕಿಗಿಂತ ಧಾರ್ಮಿಕ ಹಕ್ಕು ದೊಡ್ಡದಲ್ಲ: ಮದ್ರಾಸ್ ಹೈಕೋರ್ಟ್
ಈಗ 2ಜಿ ಸೇವೆಗಳನ್ನು ಮಾತ್ರ ನೀಡಲಾಗುತ್ತಿದೆ. ಇದರಿಂದಾಗುವ ಸಮಸ್ಯೆಯನ್ನು ಪರಿಶೀಲನೆ ನಡೆಸಲು ಸಮಿತಿಯಿದ್ದು, ಸಮಿತಿ ವರದಿ ನೀಡಿದ ನಂತರ ಶೀಘ್ರದಲ್ಲೇ ಒಳ್ಳೆಯ ಸುದ್ದಿ ಬರಲಿದೆ ಎಂದು ನಾನು ಆಶಿಸುತ್ತೇನೆ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಮೊದಲು ಜಮ್ಮು ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನವನ್ನು ತೆಗೆದು ಹಾಕಲು ಸಂವಿಧಾನಕ್ಕೆ ತಿದ್ದುಪಡಿ ಮಾಡುವ ವೇಳೆ ಮುಂಜಾಗ್ರತಾ ಕ್ರಮವಾಗಿ ಇಂಟರ್ನೆಟ್ ಸೇವೆಗಳನ್ನು ರದ್ದು ಮಾಡಲಾಗಿತ್ತು. ಜನವರಿ 2020ರಲ್ಲಿ 2ಜಿ ಸೇವೆಗಳನ್ನು ನೀಡಲಾಗಿದ್ದು, ಕೇವಲ ಎರಡು ಜಿಲ್ಲೆಗಳಲ್ಲಿ 4ಜಿ ಇಂಟರ್ನೆಟ್ ಸೇವೆ ಒದಗಿಸಲಾಗುತ್ತಿದೆ.