ಯಮುನಾನಗರ(ಹರಿಯಾಣ):ಇತ್ತೀಚಿನ ದಿನಗಳಲ್ಲಿ ಹರಿಯಾಣದಲ್ಲೂ ಕೂಡ ಅಪರಾಧ ಕೃತ್ಯಗಳ ಸಂಖ್ಯೆಯಲ್ಲಿ ಗಣನೀಯವಾದ ಏರಿಕೆ ಕಂಡು ಬರುತ್ತಿದ್ದು, ಹಾಡಹಗಲೇ ಕೊಲೆ, ಕೊಲೆ ಯತ್ನ, ದರೋಡೆಯಂತಹ ಘಟನೆಗಳು ನಡೆಯುತ್ತಿವೆ. ಇದೀಗ ಯಮುನಾನಗರದಲ್ಲಿ ನಡೆದಿರುವ ಘಟನೆವೊಂದು ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಯುವಕನೋರ್ವನ ಮೇಲೆ ಕಬ್ಬಿಣದ ರಾಡ್ನಿಂದ ಕೆಲವರು ಹಲ್ಲೆ ನಡೆಸಿದ್ದಾರೆ.
ಅಂಗಡಿವೊಂದರಲ್ಲಿ ಕುಳಿತಿದ್ದ ಯುವಕನ ಮೇಲೆ ಕೆಲ ದುಷ್ಕರ್ಮಿಗಳು ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಲಭ್ಯವಾಗಿರುವ ಮಾಹಿತಿ ಪ್ರಕಾರ ಯಮುನಾನಗರದ ಸಧೌರ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಯುವಕನೋರ್ವನ ಮೇಲೆ ಕೆಲವರು ಅಮಾನವೀಯ ರೀತಿಯಲ್ಲಿ ಹಲ್ಲೆ ನಡೆಸಿದ್ದಾರೆ. ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿರುವ ವ್ಯಕ್ತಿ, ಕಿರುಚಾಡಿದ್ದಾನೆ. ಆದರೂ, ಯಾರೂ ಕೂಡ ಆತನ ಸಹಾಯಕ್ಕೆ ಬಂದಿಲ್ಲ. ಹಲ್ಲೆಗೊಳಗಾಗಿರುವ ಯುವಕನ ಕಾಲು, ಕೈ ಮುರಿದಿವೆ.