ಗ್ವಾಲಿಯರ್(ಮಧ್ಯಪ್ರದೇಶ): ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ನಾಲ್ಕರಿಂದ ಐವರು ಕೂಲಿ ಕಾರ್ಮಿಕರ ಮೇಲೆ ಅಮಾನವೀಯ ರೀತಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಇದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಕೂಲಿ ಕಾರ್ಮಿಕರ ಮೇಲೆ ಅಮಾನವೀಯ ರೀತಿ ಹಲ್ಲೆ.. ವಿಡಿಯೋ ವೈರಲ್ - ಕೂಲಿ ಕಾರ್ಮಿಕರ ಮೇಲೆ ಹಲ್ಲೆ ವಿಡಿಯೋ
ವೈರಲ್ ಆಗಿರುವ ವಿಡಿಯೋ ಆಧಾರದ ಮೇಲೆ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ..
beaten up by some people
ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಕೆಲಸಗಾರರ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ. ಲಭ್ಯವಾಗಿರುವ ಮಾಹಿತಿ ಪ್ರಕಾರ 4-5 ಕೂಲಿ ಕಾರ್ಮಿಕರನ್ನ ಒತ್ತೆಯಾಳಾಗಿಟ್ಟುಕೊಂಡು, ಕೋಲಿನಿಂದ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಗುಂಪಿನಲ್ಲಿದ್ದ ಕೆಲವರು ಇದರ ವಿಡಿಯೋ ವೈರಲ್ ಮಾಡಿದ್ದಾರೆ.
ಬಹೋದಾಪುರ ಪೊಲೀಸ್ ಠಾಣೆ ಪ್ರದೇಶದ ಆನಂದ ನಗರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ವೈರಲ್ ಆಗಿರುವ ವಿಡಿಯೋ ಆಧಾರದ ಮೇಲೆ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.