ಹೈದರಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡ ಗೋಪಾಲ ಇಟಾಲಿಯಾ ಈಗ ರಾಜಕೀಯ ವಲಯದಲ್ಲಿ ಪ್ರಮುಖವಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಸರ್ಕಾರಿ ನೌಕರರಾಗಿದ್ದ ಇವರು ನೌಕರಿ ಬಿಟ್ಟು ರಾಜಕೀಯ ಸೇರಿದ್ದರು. ಸರ್ಕಾರದ ವಿರುದ್ಧ ಪ್ರತಿಭಟಿಸಿ ಮಾಜಿ ಗೃಹ ಸಚಿವ ಪ್ರದೀಪ್ ಸಿಂಗ್ ಜಡೇಜಾ ಅವರ ಮೇಲೆ ಶೂ ಎಸೆದವರು ಇವರೇ. ಆಮ್ ಆದ್ಮಿ ಪಕ್ಷಕ್ಕೆ ಸೇರಿದ ನಂತರ ಅವರು ಪಕ್ಷದಲ್ಲಿ ಪ್ರಮುಖ ಸ್ಥಾನ ಹೇಗೆ ಪಡೆದುಕೊಂಡರು ಎಂಬ ಮಾಹಿತಿ ಇಲ್ಲಿದೆ.
ಆಮ್ ಆದ್ಮಿ ಪಕ್ಷದಲ್ಲಿ ಪ್ರಮುಖ ಸ್ಥಾನ ಹೊಂದಿರುವ ಗೋಪಾಲ್ ಇಟಾಲಿಯಾ ಪೊಲೀಸ್ ಕಾನ್ಸ್‌ಟೇಬಲ್ ಆಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಆ ನಂತರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದು ಹಾಗೂ ಮಾಜಿ ಮುಖ್ಯಮಂತ್ರಿಗೆ ಶೂ ಎಸೆದ ಘಟನೆ ಚರ್ಚೆಗೆ ಗ್ರಾಸವಾಯಿತು. ನಂತರ ಅವರು ಆಮ್ ಆದ್ಮಿ ಪಕ್ಷಕ್ಕೆ ಸೇರಿದರು ಮತ್ತು ಸೂರತ್‌ನ ಸ್ಥಳೀಯ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಿದರು. ಪ್ರಸ್ತುತ, ಅವರನ್ನು ಪ್ರಧಾನಿ ಹುದ್ದೆಯ ಸ್ಪರ್ಧಿ ಎಂದು ಹೇಳಲಾಗುತ್ತಿದೆ.
ಇಟಾಲಿಯಾ ಜೀವನ:ಗೋಪಾಲ್ ಇಟಾಲಿಯಾ ಅವರು 21 ಜುಲೈ 1989 ರಂದು ಗುಜರಾತ್‌ನ ಬೊಟಾಡ್‌ನಲ್ಲಿ ಜನಿಸಿದರು. ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಭಾವನಗರ ಜಿಲ್ಲೆಯ ಉಮ್ರಾಲಾ ತಾಲೂಕಿನ ತಿಂಬಿ ಗ್ರಾಮದಲ್ಲಿ ಮತ್ತು ಪ್ರೌಢ ಶಿಕ್ಷಣವನ್ನು ಧೋಲಾ ಗ್ರಾಮದಲ್ಲಿ ಪೂರ್ಣಗೊಳಿಸಿದರು. ಅವರು ಅಹಮದಾಬಾದ್‌ನ ಗುಜರಾತ್ ವಿಶ್ವವಿದ್ಯಾಲಯದಿಂದ ರಾಜ್ಯಶಾಸ್ತ್ರದಲ್ಲಿ ಪದವಿ ಪಡೆದಿದ್ದಾರೆ.
ಕಾನ್ಸ್‌ಟೇಬಲ್ ಆಗಿ ವೃತ್ತಿ ಜೀವನ ಆರಂಭ:ಜನವರಿ 2013 ರಿಂದ ಗೋಪಾಲ್ ಇಟಾಲಿಯಾ ಅಹಮದಾಬಾದ್ ಪೊಲೀಸ್‌ನ ಮಧುಪುರ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೆಬಲ್ ಆಗಿ ಕೆಲಸ ಮಾಡಿದರು. ನಂತರ 2014 ರಲ್ಲಿ ಅಹಮದಾಬಾದ್ ಕಲೆಕ್ಟರ್ ಕಚೇರಿಯ ಅಡಿ ಧಂಡುಕಾ ತಾಲೂಕು ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಕಚೇರಿಯಲ್ಲಿ ಕಂದಾಯ ಕ್ಲರ್ಕ್ ಆಗಿ ಕೆಲಸ ಮಾಡಿದರು.
ನಿರುದ್ಯೋಗಿ ಯುವಕರ ಹಕ್ಕುಗಳ ಜೊತೆಗೆ ನಾಗರಿಕರ ಹಕ್ಕುಗಳಿಗಾಗಿ ಹೋರಾಡುತ್ತಾರೆ. ಸರ್ಕಾರಿ ನೌಕರಿಯಲ್ಲಿದ್ದಾಗ ಇಟಾಲಿಯಾ ಜನವರಿ 2017 ರಿಂದೀಚೆಗೆ ಖ್ಯಾತಿ ಪಡೆಯತೊಡಗಿದರು. ಇದೇ ವೇಳೆ ಅವರು ಮಾಜಿ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಅವರಿಗೆ ಕರೆ ಮಾಡಿ ಗುಜರಾತ್‌ನಲ್ಲಿ ಸಾರಾಯಿ ನಿಷೇಧ ನೀತಿಯ ಸಂಪೂರ್ಣ ಉಲ್ಲಂಘನೆ ಮತ್ತು ಸರ್ಕಾರಿ ಅಧಿಕಾರಿಗಳ ಕುತಂತ್ರದ ಬಗ್ಗೆ ದೂರು ನೀಡಿದರು. ಈ ಸಂಭಾಷಣೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.