ನವದೆಹಲಿ: ಸಾಮಾಜಿಕ ಜಾಲತಾಣಗಳ ಮಾರ್ಗಸೂಚಿ ಕೇಂದ್ರ ಸರ್ಕಾರದಿಂದ ರಿಲೀಸ್ ಆಗಿದ್ದು, ಒಟಿಟಿ ಮತ್ತು ಡಿಜಿಟಲ್ ಮಾಧ್ಯಮಗಳಲ್ಲಿ ತಮ್ಮ ವಿವರ ಬಹಿರಂಗಪಡಿಸುವುದು ಕಡ್ಡಾಯವಾಗಿದೆ.ಆದರೆ ನೋಂದಣಿ ಅಗತ್ಯವಿಲ್ಲ ಎಂದು ಕೇಂದ್ರ ಸಚಿವ ರವಿಂಶಂಕರ್ ಪ್ರಸಾದ್ ಹೇಳಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ರವಾನೆ ಮಾಡುವವರೇ ಅದಕ್ಕೆ ಮುಖ್ಯ ಕಾರಣಕರ್ತರಾಗಿದ್ದು, ಏನೇ ತೊಂದರೆ ಆದರೂ ಅವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದಿದ್ದಾರೆ. ಇದಕ್ಕಾಗಿ ಮೂರು ಹಂತಗಳಲ್ಲಿ ಒಟಿಟಿ ಮಾಡಲಾಗಿದೆ ಎಂದಿದ್ದಾರೆ. ಪ್ರಮುಖವಾಗಿ ಮಹಿಳೆಯರು, ವ್ಯಕ್ತಿಗಳ ಖಾಸಗಿ ವಿಚಾರ ಹಾಗೂ ನಗ್ನತೆ ಮತ್ತು ಲೈಂಗಿಕತೆ ವಿಚಾರವಾಗಿ ಮಾಹಿತಿ ಹರಿಬಿಟ್ಟರೆ 24 ಗಂಟೆಯೊಳಗೆ ತೆಗೆದು ಹಾಕಲಾಗುವುದು ಎಂದು ಹೇಳಿದ್ದಾರೆ. ಜತೆಗೆ ಮಹಿಳೆಯರ ಘನತೆಗೆ ಧಕ್ಕೆ ಬಾರದಂತೆ ತಡೆಯಲು ವಿಶೇಷ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ದೇಶದ ಸಾರ್ವಭೌಮತೆ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವ ಮುಖ್ಯ ಉದ್ದೇಶದಿಂದ ಈ ಮಾರ್ಗಸೂಚಿ ಜಾರಿಗೊಳಿಸಲಾಗಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.ಭಾರತದಲ್ಲಿ 53 ಕೋಟಿ ಮಂದಿ ವ್ಯಾಟ್ಸಪ್, 44.8 ಕೋಟಿ ಮಂದಿ ಯೂಟ್ಯೂಬ್, 41 ಕೋಟಿ ಮಂದಿ ಫೇಸ್ಬುಕ್, 21 ಕೋಟಿ ಮಂದಿ ಇನ್ಸ್ಟಾಗ್ರಾಂ ಹಾಗೂ 1.5 ಕೋಟಿ ಮಂದಿ ಟ್ವಿಟರ್ ಬಳಕೆ ಮಾಡ್ತಿದ್ದಾರೆ ಎಂದು ಕೇಂದ್ರ ಸಚಿವರು ಮಾಹಿತಿ ನೀಡಿದ್ದು, ಭಾರತದಲ್ಲಿ ಸೋಷಿಯಲ್ ಮೀಡಿಯಾ ಹೆಚ್ಚಾಗಿ ಬಳಕೆಯಾಗುತ್ತಿದೆ ಎಂಬ ಖುಷಿ ನಮಗಿದೆ. ಆದರೆ ಇವುಗಳಿಂದ ಹೆಚ್ಚಿನ ದುರ್ಬಳಕೆಯಾಗುತ್ತಿರುವುದು ಕಂಡು ಬಂದಿದೆ ಎಂದರು.