ರಾಜಾನಂದಗಾಂವ್:ಶಾಲಾ ಶೈಕ್ಷಣಿಕ ಪ್ರವಾಸಕ್ಕೆ ಕರೆದೊಯ್ಯುವ ನೆಪದಲ್ಲಿ ಶಿಕ್ಷಕನೊಬ್ಬ 16 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಛತ್ತೀಸ್‌ಗಢದ ರಾಜನಂದಗಾಂವ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ.
ವಿದ್ಯಾರ್ಥಿನಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರೌಢಶಾಲೆಯ ವಿಜ್ಞಾನ ಶಿಕ್ಷಕನನ್ನು ಬಂಧಿಸಿದ್ದಾರೆ. ಡಿಸೆಂಬರ್ 2ರಂದು ಶೈಕ್ಷಣಿಕ ಪ್ರವಾಸಕ್ಕೆ ಕರೆದೊಯ್ಯುವ ನೆಪದಲ್ಲಿ ಆರೋಪಿಯು ಸಂತ್ರಸ್ತೆಯ ಪೋಷಕರಿಗೆ ತಿಳಿಸದೆ ಆಕೆಯನ್ನು ಶಾಲೆಯಿಂದ ಬಲವಂತವಾಗಿ ತನ್ನ ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ, ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ಬಾಲಕಿಯ ಅಕ್ಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವುದಾಗಿ ಶಿಕ್ಷಕ ಬೆದರಿಕೆ ಹಾಕಿದ್ದಾನೆ ಎಂದು ದೂರಲಾಗಿದೆ.