ನವದೆಹಲಿ:ಕೊರೊನಾ ವೈರಸ್ಗೆ ದೇಶದಲ್ಲಿ ಅಭಿವೃದ್ಧಿಗೊಂಡಿರುವ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆ ನೀಡಲಾಗುತ್ತಿದೆ. ಆದರೆ ಈ ವ್ಯಾಕ್ಸಿನ್‌ಗಳ ಬಗ್ಗೆ ಕೆಲವರು ಸುಳ್ಳು, ಆಧಾರರಹಿತ ಸುದ್ದಿ ಹರಡುತ್ತಿದ್ದಾರೆ. ಅಂಥವರಿಗೆ ಕೇಂದ್ರ ಸರ್ಕಾರ ಇದೀಗ ಎಚ್ಚರಿಕೆಯ ಸಂದೇಶ ರವಾನಿಸಿದೆ.
ಕೋವಿಡ್ ವ್ಯಾಕ್ಸಿನ್ ಬಗ್ಗೆ ಸುಳ್ಳು ಸುದ್ದಿ ಹರಡಿದರೆ ಕಾನೂನು ಕ್ರಮ: ಕೇಂದ್ರದಿಂದ ಎಚ್ಚರಿಕೆ - ಕೊರೊನಾ ವ್ಯಾಕ್ಸಿನ್ ಸುದ್ದಿ
![ಕೋವಿಡ್ ವ್ಯಾಕ್ಸಿನ್ ಬಗ್ಗೆ ಸುಳ್ಳು ಸುದ್ದಿ ಹರಡಿದರೆ ಕಾನೂನು ಕ್ರಮ: ಕೇಂದ್ರದಿಂದ ಎಚ್ಚರಿಕೆ Covid vaccines](https://etvbharatimages.akamaized.net/etvbharat/prod-images/768-512-10373393-thumbnail-3x2-wdfdfd.jpg)
15:27 January 25
ಸುಳ್ಳು ಸುದ್ದಿ ಹಬ್ಬಿಸುವವರಿಗೆ ಕೇಂದ್ರದಿಂದ ಖಡಕ್ ವಾರ್ನಿಂಗ್
ಇದನ್ನೂ ಓದಿ: ಕೋವಿಡ್ ಮಧ್ಯೆಯೂ ಯಶಸ್ವಿಯಾಗಿ ಚುನಾವಣೆ ನಡೆಸಿದ್ದು ಅಸಾಧಾರಣ ಸಾಧನೆ: ರಾಷ್ಟ್ರಪತಿ
ವ್ಯಾಕ್ಸಿನ್ ಬಗ್ಗೆ ಇಲ್ಲಸಲ್ಲದ ಸುಳ್ಳು ಸುದ್ದಿಗಳನ್ನು ಹರಡಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಈ ಬಗ್ಗೆ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.
ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯಡಿ ಕ್ರಮ ಜರುಗಿಸಲಾಗುವುದು ಎಂದು ಅವರು ಹೇಳಿದ್ದಾರೆ. ಜತೆಗೆ ಕೋವಿಡ್ ವ್ಯಾಕ್ಸಿನ್‌ಗಳ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವುದನ್ನು ನಿಲ್ಲಿಸುವಂತೆಯೂ ಅವರು ಮನವಿ ಮಾಡಿದ್ದಾರೆ.