ಕೋಲ್ಕತ್ತಾ (ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳದಲ್ಲಿ ಡೆಂಘೀ ಹಾವಳಿ ಹೆಚ್ಚಾಗಿದೆ. ಹೀಗಾಗಿ ರಾಜ್ಯದ ಆರ್ಥಿಕ ಸ್ಥಿತಿ ಮತ್ತು ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣಗಳ ಮೌಲ್ಯಮಾಪನ ಮಾಡಿ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಕೆಲ ದಿನಗಳ ಹಿಂದೆ ತಮ್ಮ ಅಮೆರಿಕ ಪ್ರವಾಸವನ್ನು ರದ್ದುಗೊಳಿಸಿದ್ದರು. ಇದೀಗ ಪಶ್ಚಿಮ ಬಂಗಾಳದಾದ್ಯಂತ ಹೆಚ್ಚುತ್ತಿರುವ ಡೆಂಘೀ ಪ್ರಕರಣಗಳನ್ನು ನಿಭಾಯಿಸಲು ಅವರು ತಮ್ಮ ಒಂದು ತಿಂಗಳ ಸಂಬಳವನ್ನು ದೇಣಿಗೆ ನೀಡಿದ್ದಾರೆ.
ರಾಜ್ಯದಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ರಾಜ್ಯಪಾಲರು ತಮ್ಮ ಒಂದು ತಿಂಗಳ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ ಎಂದು ರಾಜ್ಯಭವನದ ಮೂಲಗಳು ಹೇಳಿವೆ. ಹಣದ ಮೊತ್ತದ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಆದರೆ, ಪ್ರಸ್ತುತ ದೇಶದಲ್ಲಿ ರಾಜ್ಯಪಾಲರು ವಿವಿಧ ಭತ್ಯೆ ಮತ್ತು ಸೌಲಭ್ಯಗಳ ಜೊತೆಗೆ ಮಾಸಿಕ ಸಂಭಾವನೆಯಾಗಿ ಸುಮಾರು 3.5 ಲಕ್ಷ ರೂ. ಪಡೆಯುತ್ತಿದ್ದಾರೆ. ಇಷ್ಟೇ ಮೊತ್ತದ ಹಣವನ್ನು ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸಿಎಂ ಪರಿಹಾರ ನಿಧಿಗೆ ಇದೇ ನೀಡಿದ್ದಾರೆ. ಈ ದೇಣಿಗೆಯನ್ನು ಪಶ್ಚಿಮ ಬಂಗಾಳದ ಸಾಮಾನ್ಯ ಜನರ ಡೆಂಘೀ ಚಿಕಿತ್ಸಾ ವೆಚ್ಚವನ್ನು ಭರಿಸುವ ಉದ್ದೇಶಕ್ಕಾಗಿ ಕೊಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮತ್ತೊಂದೆಡೆ, ಕಳೆದ ಕೆಲವು ತಿಂಗಳಲ್ಲಿ ರಾಜ್ಯಪಾಲ ಸಿ.ವಿ.ಆನಂದ ಬೋಸ್ ಅವರು ಸತತವಾಗಿ ಅನೇಕ ನಗದು ಪ್ರಶಸ್ತಿಗಳನ್ನು ಘೋಷಿಸಿದ್ದಾರೆ. ದುರ್ಗಾ ಪೂಜೆಯ ನೆನಪಿಗಾಗಿ 108 ಜನರಿಗೆ 'ದುರ್ಗಾ ಭಾರತ ಸಮ್ಮಾನ್' ಎಂದು ಪ್ರಶಸ್ತಿ ಘೋಷಿಸಿದ್ದಾರೆ. ಇದಕ್ಕಾಗಿ ರಾಜಭವನವು ವಿವಿಧ ಕ್ಷೇತ್ರಗಳ ಗಣ್ಯರಿಂದ ಅರ್ಜಿಗಳ ಆಹ್ವಾನಿಸಲಾಗಿತ್ತು. ಪ್ರಶಸ್ತಿಗಾಗಿ ಸಮಾಜ ಸೇವಕರು ಹಾಗೂ ಅಥವಾ ಸಂಸ್ಥೆಗಳು ಸೆಪ್ಟೆಂಬರ್ ತಿಂಗಳೊಳಗೆ ಇಮೇಲ್ ಮೂಲಕ ಸಲ್ಲಿಸಲು ಸೂಚಿಸಲಾಗಿತ್ತು.