ನವದೆಹಲಿ: ಮೇಘಾಲಯದ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ರೈತರ ವಿಷಯದಲ್ಲಿ ಪ್ರಧಾನಿ ದುರಹಂಕಾರಿ ಎಂದು ಹೇಳಿರುವುದು ದಾಖಲಾಗಿದೆ.. ಪ್ರಧಾನಿ ನರೇಂದ್ರ ಮೋದಿ ಅವರು ಇದು ನಿಜವೇ ಎಂದು ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಟ್ವಿಟರ್‌ನಲ್ಲಿ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇದೇ ವಿಷಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಧಾನಿ ಮೋದಿ ಅವರನ್ನು ಹುಚ್ಚ ಎಂದು ಕರೆದಿದ್ದಾರೆ ಎಂದು ಹೇಳಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಸಾಂವಿಧಾನಿಕ ಹುದ್ದೆಯಲ್ಲಿ ಇರುವವರು ಈ ರೀತಿಯ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ.. ಪ್ರಧಾನಿ ಮೋದಿ ಅವರೇ ಇದು ನಿಜವಾ ಎಂದು ಖರ್ಗೆ ಟ್ವಿಟರ್‌ನಲ್ಲಿ ಪ್ರಶ್ನೆ ಮಾಡಿದ್ದಾರೆ.