ನವದೆಹಲಿ:ರೈತರ ಪ್ರತಿಭಟನೆ ಇಂದು 17ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಪ್ರತಿಭಟನಾಕಾರರಿಗೆ ಕೇಂದ್ರ ಸರ್ಕಾರದ ಭಾವನೆಗಳು ಮತ್ತು ರೈತರ ಕಲ್ಯಾಣಕ್ಕಾಗಿ ಕೈಗೊಳ್ಳುತ್ತಿರುವ ಕ್ರಮಗಳ ಬಗ್ಗೆ ಮನವರಿಕೆ ಮಾಡುವ ಪ್ರಯತ್ನ ಮುಂದುವರೆಸಿದ್ದಾರೆ.
ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಮೂರು ಕೃಷಿ ಕಾನೂನುಗಳನ್ನು ತಂದಿದೆ. ಕೃಷಿ ಕ್ಷೇತ್ರವನ್ನು ಹೆಚ್ಚು ಸಮೃದ್ಧವಾಗಿಸಲು ಈ ಎಲ್ಲಾ ಕ್ರಮಗಳನ್ನು ಅನುಸರಿಸುತ್ತಿದೆ ಎಂದು ಅವರು ಹೇಳಿದ್ದಾರೆ.
ರೈತರ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ನೀಡುವುದು, ಆದಾಯವನ್ನು ಹೆಚ್ಚಿಸಲು ಮತ್ತು ಅವರ ಜೀವನದಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡಲು ಸರ್ಕಾರ ಕಾನೂನುಗಳನ್ನು ತಂದಿದೆ. 2022 ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದೆ ಎಂದು ಪುನರುಚ್ಚರಿಸಿದ ತೋಮರ್, ರೈತರ ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸಲು ಸರ್ಕಾರ ಹೊಸ ಯೋಜನೆಗಳ ಮೂಲಕ ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಪ್ರಧಾನಿ ಕಿಸಾನ್ ಸಮ್ಮನ್ ನಿಧಿ ಅಡಿಯಲ್ಲಿ ಒಂದು ಲಕ್ಷ ಕೋಟಿ ರೂಪಾಯಿಗಳನ್ನು ದೇಶದಾದ್ಯಂತ 10.5 ಕೋಟಿ ರೈತರಿಗೆ ವಿತರಿಸಿದೆ ಎಂದು ಅವರು ಹೇಳಿದರು.
ಕೃಷಿ ಕ್ಷೇತ್ರ ಮತ್ತು ರೈತರ ಕಲ್ಯಾಣಕ್ಕಾಗಿ ಸರ್ಕಾರ 50,000 ಕೋಟಿ ರೂಪಾಯಿಗಳ ಪ್ಯಾಕೇಜ್ ಅನ್ನು ಕೇಂದ್ರ ಪರಿಚಯಿಸಿದೆ. ಈ ಪ್ಯಾಕೇಜ್ ಅಡಿಯಲ್ಲಿ ಒಂದೊಂದಾಗಿ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ತೋಮರ್ ವಿವರಿಸಿದರು.