ನವದೆಹಲಿ:ದೇಶದಲ್ಲಿ ಏಪ್ರಿಲ್ 11ರಿಂದ ಏಪ್ರಿಲ್ 14ರವರೆಗೆ ಟಿಕಾ ಉತ್ಸವ ಆಚರಣೆ ಮಾಡಲಾಗಿದೆ. ಆದರೆ, ಅನೇಕ ರಾಜ್ಯಗಳಿಗೆ ಕೇಂದ್ರ ಸರ್ಕಾರ ಹೆಚ್ಚಿನ ಪ್ರಮಾಣದಲ್ಲಿ ವ್ಯಾಕ್ಸಿನೇಷನ್ ಪೂರೈಕೆ ಮಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಪ್ರಿಯಾಂಕಾ ಆಕ್ರೋಶ ಹೊರಹಾಕಿದ್ದಾರೆ.
ವಿವಿಧ ರಾಜ್ಯಗಳಲ್ಲಿ ಕೋವಿಡ್ ವ್ಯಾಕ್ಸಿನೇಷನ್ ನೀಡಿಕೆ ಕಡಿಮೆಯಾಗುತ್ತಿರುವ ವಿಚಾರವನ್ನ ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಸರ್ಕಾರ ಏಪ್ರಿಲ್ನಲ್ಲಿ ಟಿಕಾ ಉತ್ಸವ ಆಚರಣೆ ಮಾಡಿತು. ಆದರೆ ಕೋವಿಡ್ ವಿರುದ್ಧ ಹೇರಳವಾಗಿ ಲಸಿಕೆ ನೀಡುವಲ್ಲಿ ಸಂಪೂರ್ಣವಾಗಿ ವಿಫಲಗೊಂಡಿದೆ ಎಂದಿದ್ದಾರೆ.
ಭಾರತ ಲಸಿಕೆ ಉತ್ಪಾದನೆ ಮಾಡುವ ಅತಿದೊಡ್ಡ ದೇಶವಾಗಿದೆ. ಆದರೂ ಲಸಿಕೆ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ಸಂಪೂರ್ಣವಾಗಿ ವಿಫಲಗೊಂಡಿದ್ದು, ಕಳೆದ 30 ದಿನಗಳಲ್ಲಿ ವ್ಯಾಕ್ಸಿನೇಷನ್ ಹಂಚಿಕೆ ಶೇ.82ರಷ್ಟು ಕುಸಿತಗೊಂಡಿದೆ ಎಂದಿದ್ದಾರೆ.