ETV Bharat Karnataka

ಕರ್ನಾಟಕ

karnataka

ETV Bharat / bharat

ಮಹಾರಾಷ್ಟ್ರದಲ್ಲಿ ಹೆಚ್ಚಿದ ಕೊರೊನಾ: ಚಿತ್ರಮಂದಿರ, ಕಚೇರಿಗಳಲ್ಲಿ ಶೇ.50ರಷ್ಟು ಜನರಿಗೆ ಅವಕಾಶ - ಮಹಾರಾಷ್ಟ್ರ ಕೊರೊನಾ

ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್​ ಹಾವಳಿ ಹೆಚ್ಚಾಗುತ್ತಿರುವ ಕಾರಣ ಅಲ್ಲಿನ ಸರ್ಕಾರ ಹೊಸ ಮಾರ್ಗಸೂಚಿ ಜಾರಿಗೊಳಿಸಿ ಆದೇಶ ಹೊರಡಿಸಿದೆ.

Govt of Maharashtra
Govt of Maharashtra
author img

By

Published : Mar 19, 2021, 4:11 PM IST

ಮುಂಬೈ:ಮಹಾಮಾರಿ ಕೊರೊನಾ ವೈರಸ್ ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿದ್ದು, ಇದರ ಬೆನ್ನಲ್ಲೇ ಸರ್ಕಾರ ಇದೀಗ ಕೆಲ ಮಾರ್ಗಸೂಚಿಗಳೊಂದಿಗೆ ಮಹತ್ವದ ಆದೇಶ ಹೊರಹಾಕಿದೆ.

ಮಾರ್ಚ್​ 31ರವರೆಗೆ ಈ ನಿಯಮ ಜಾರಿಗೊಳ್ಳಲಿದ್ದು, ಚಿತ್ರಮಂದಿರಗಳಲ್ಲಿ ಹಾಗೂ ಖಾಸಗಿ ಕಚೇರಿಯಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ ನೀಡಿದೆ. ಮಾಸ್ಕ್​ ಹಾಕಿಕೊಳ್ಳುವುದು ಕಡ್ಡಾಯಗೊಳಿಸಲಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಗುಂಪುಗಾರಿಕೆಗೆ ಯಾವುದೇ ಕಾರಣಕ್ಕೂ ಅವಕಾಶವಿಲ್ಲ ಎಂದು ತಿಳಿಸಿದೆ. ಪ್ರತಿಯೊಬ್ಬರೂ ಕೋವಿಡ್ ನಿಯಮ ಪಾಲನೆ ಮಾಡುವಂತೆ ಸೂಚನೆ ನೀಡಲಾಗಿದೆ.

ಈಗಾಗಲೇ ಪುಣೆಯಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ನಾಗ್ಪುರ್​ದಲ್ಲಿ ಲಾಕ್​ಡೌನ್​ ಜಾರಿಗೊಳಿಸಲಾಗಿದೆ. ನಿನ್ನೆ ಒಂದೇ ದಿನ ರಾಜ್ಯದಲ್ಲಿ 25 ಸಾವಿರ ಕೋವಿಡ್ ಕೇಸ್​ ಪತ್ತೆಯಾಗಿರುವುದು ಇದೀಗ ಮತ್ತಷ್ಟು ಆತಂಕಕ್ಕೆ ದಾರಿ ಮಾಡಿಕೊಟ್ಟಿದೆ.

ಪಂಜಾಬ್​ನಲ್ಲೂ ಹೊಸ ನಿಯಮ ಜಾರಿ

ಪಂಜಾಬ್​ನಲ್ಲೂ ಕಳೆದ ಕೆಲ ದಿನಗಳಿಂದ ಕೋವಿಡ್​ ಸೋಂಕಿತ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಹೊಸ ನಿಯಮ ಜಾರಿಗೊಳಿಸಲಾಗಿದೆ. 11 ಜಿಲ್ಲೆಗಳಲ್ಲಿ ನೈಟ್​ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಮಾರ್ಚ್​ 31ರವರೆಗೆ ಶಾಲೆ-ಕಾಲೇಜ್​ಗಳು ಬಂದ್​ ಇರಲಿವೆ. ಜತೆಗೆ ಸಿನಿಮಾ ಹಾಲ್​ ,ಮಾಲ್​ಗಳ ಮೇಲೂ ನಿಯಂತ್ರಣ ಹೇರಲಾಗಿದೆ.

ABOUT THE AUTHOR

...view details