ನವದೆಹಲಿ: ದೇಶದಲ್ಲಿ ವಿದ್ಯಾವಂತ ಯುವಕರು ನಿರುದ್ಯೋಗವನ್ನು ಎದುರಿಸುತ್ತಿದ್ದಾರೆ. ಪದವಿ ಪಡೆದುಕೊಂಡಿದ್ದಾಕ್ಕಾಗಿ ಸರ್ಕಾರ ಅವರಿಗೆ ದಂಡ ವಿಧಿಸುತ್ತಿರುವಂತೆ ಕಾಣುತ್ತಿದೆ ಎಂದು ಕೆಂದ್ರದ ವಿರುದ್ಧ ರಾಹುಲ್ ವಾಗ್ದಾಳಿ ನಡೆಸಿದ್ದಾರೆ.
ದೇಶದಲ್ಲಿ ವಿದ್ಯಾವಂತ ಯುವಕರಿಗೆ ಕೇಂದ್ರ ಸರ್ಕಾರ ದಂಡ ವಿಧಿಸುತ್ತಿದೆ: ರಾಹುಲ್ ಗಾಂಧಿ - ರಾಹುಲ್ ಗಾಂಧಿ
ವಿದ್ಯಾವಂತರು ನಿರುದ್ಯೋಗ ಸಮಸ್ಯೆ ಎದುರಿಸುತ್ತಿದ್ದು, ಸರ್ಕಾರ ಈ ಕುರಿತು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕೆಂದ್ರದ ವಿರುದ್ಧ ರಾಹುಲ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಉನ್ನತ ಶಿಕ್ಷಣ ಸಂಸ್ಥೆಗಳ ಅಧ್ಯಾಪಕರ ಹುದ್ದೆ ಖಾಲಿ ಇದೆ. ಸರ್ಕಾರ ಈ ಕುರಿತು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ವಿದ್ಯಾವಂತರು ನಿರುದ್ಯೋಗ ಸಮಸ್ಯೆ ಎದುರಿಸುತ್ತಿದ್ದು, ಪದವಿ ಹೊಂದಿದ್ದಕ್ಕಾಗಿ ವಿಶೇಷವಾಗಿ ಒಬಿಸಿ, ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ದಂಡ ವಿಧಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಇನ್ನು ಇದಕ್ಕೆ ಸಂಬಂಧಪಟ್ಟಂತೆ ಐಐಟಿಗಳು ಮತ್ತು ಹಲವಾರು ಕೇಂದ್ರ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಅಧ್ಯಾಪಕರ ಹುದ್ದೆಗಳನ್ನು ತೋರಿಸುವ ಟೇಬಲ್ ಅನ್ನು ಟ್ಯಾಗ್ ಮಾಡಿದ್ದಾರೆ. ಈ ಹಿಂದೆ ಕೆಲವು ಬಿಜೆಪಿ ನಾಯಕರ ಶೈಕ್ಷಣಿಕ ಪದವಿಗಳ ಬಗ್ಗೆ ಕಾಂಗ್ರೆಸ್ ನಾಯಕರು ಪ್ರಶ್ನೆಗಳನ್ನು ಎತ್ತಿದ್ದರು.