ಕರ್ನಾಟಕ

karnataka

ETV Bharat / bharat

ಪ್ರತಿಪಕ್ಷಗಳ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ: ನರೇಂದ್ರ ಮೋದಿ - modi reaction about winter session

ಕೇಂದ್ರ ಸರ್ಕಾರ ಎಲ್ಲಾ ವಿಷಯಗಳ ಕುರಿತು ಚರ್ಚಿಸಲು ಸಿದ್ಧವಿದೆ. ಎಲ್ಲಾ ಪ್ರಶ್ನೆಗಳಿಗೂ ನಾವು ಉತ್ತರಿಸುತ್ತೇವೆ ಎಂದು ಚಳಿಗಾಲದ ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

PM Modi
ನರೇಂದ್ರ ಮೋದಿ

By

Published : Nov 29, 2021, 11:39 AM IST

Updated : Nov 29, 2021, 11:53 AM IST

ನವದೆಹಲಿ: ಇಂದಿನಿಂದ ಸಂಸತ್​ ಚಳಿಗಾಲದ ಅಧಿವೇಶನ ಆರಂಭಗೊಂಡಿದೆ. ಎಲ್ಲಾವಿಷಯಗಳ ಕುರಿತು ಚರ್ಚಿಸಲು ಹಾಗೂ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

ಅಧಿವೇಶನಕ್ಕೂ ಮುನ್ನ ಸರ್ವ ಪಕ್ಷಗಳ ಸಭೆ ನಡೆಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಹಿತಾಸಕ್ತಿ ವಿಷಯಗಳ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸಬೇಕು. ದೇಶದ ಅಭಿವೃದ್ಧಿಗೆ ಪೂರಕವಾದ ವಿಷಯಗಳನ್ನು ಚರ್ಚಿಸಲಿ ಎಂದು ನಾಗರಿಕರು ಬಯಸುತ್ತಾರೆ ಎಂದರು.

ಇದನ್ನೂ ಓದಿ:ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭ.. 3 ಕೃಷಿ ಕಾನೂನುಗಳು ವಾಪಸ್​​!

ಕೇಂದ್ರ ಸರ್ಕಾರ ಎಲ್ಲಾ ವಿಷಯಗಳ ಕುರಿತು ಹಾಗೂ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಲು ಸಿದ್ಧವಾಗಿದೆ. ಸದನ ಹೇಗೆ ಕಾರ್ಯ ನಿರ್ವಹಿಸುತ್ತದೆ ಎನ್ನುವುದು ಮಾನದಂಡವಾಗಬೇಕೇ ಹೊರತು ಹೇಗೆ ಅಡ್ಡಿಪಡಿಸಬೇಕು ಎನ್ನುವುದಲ್ಲ. ಸರ್ಕಾರದ ನೀತಿಗಳ ವಿರುದ್ಧದ ಟೀಕೆಗಳು ಸರಿಯಾಗಿರಬೇಕು. ಸಂಸತ್​ ಮತ್ತು ಪೀಠದ ಘನತೆಯನ್ನು ಎಲ್ಲರೂ ಕಾಪಾಡಬೇಕು ಎಂದು ಹೇಳಿದರು.

ಇದೇ ವೇಳೆ ಕೋವಿಡ್​-19 ವೈರಸ್​ ಹೊಸ ರೂಪಾಂತರ ಕುರಿತು ಜನರು ಜಾಗರೂಕರಾಗಿರುವಂತೆ ಮನವಿ ಮಾಡಿದರು.

Last Updated : Nov 29, 2021, 11:53 AM IST

ABOUT THE AUTHOR

...view details