ನವದೆಹಲಿ:ದೇಶದಲ್ಲಿ ಪೆಟ್ರೋಲ್, ಡಿಸೇಲ್ ಮತ್ತು ಗ್ಯಾಸ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗ್ತಿದ್ದು, ಕೇಂದ್ರ ಸರ್ಕಾರ ಇವುಗಳ ಬೆಲೆ ಇಳಿಕೆ ಮಾಡಬೇಕೆಂದು ಎನ್ಸಿಪಿ ಸಂಸದೆ ಸುಪ್ರಿಯಾ ಸುಳೆ ಒತ್ತಾಯಿಸಿದ್ದಾರೆ. ಲೋಕಸಭೆಯ ಶೂನ್ಯವೇಳೆಯಲ್ಲಿ ಮಾತನಾಡಿದ ಸಂಸದೆ, ಕೇಂದ್ರ ಸರ್ಕಾರ ತಕ್ಷಣವೇ ಮಧ್ಯಪ್ರವೇಶ ಮಾಡಬೇಕಾಗಿದ್ದು, ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡಿ, ಜನಸಾಮಾನ್ಯರು ತೊಂದರೆಗೊಳಗಾಗುವುದನ್ನ ತಪ್ಪಿಸಬೇಕು ಎಂದರು.
ಪ್ರತಿದಿನ ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಸೇರಿದಂತೆ ಅಡುಗೆ ಅನಿಲ ಬೆಲೆ ಗಗನಕ್ಕೇರುತ್ತಿದೆ. ಕೇಂದ್ರ ಸರ್ಕಾರ ಜನಸಾಮಾನ್ಯರ ಬಗ್ಗೆ ಯೋಚನೆ ಮಾಡಬೇಕಾಗಿದ್ದು, ಇವುಗಳ ಮೇಲಿನ ಬೆಲೆ ಕಡಿಮೆ ಮಾಡುವ ಮೂಲಕ ಕೆಳವರ್ಗದ ಜನರ ಮೇಲಾಗುತ್ತಿರುವ ಹೊರೆ ಕಡಿಮೆ ಮಾಡಬೇಕು ಎಂದರು.