ಕರ್ನಾಟಕ

karnataka

ETV Bharat / bharat

ರೈತ ಸಂಘಟನೆಗಳೊಂದಿಗೆ ಇಂದು ಏಳನೇ ಸುತ್ತಿನ ಮಾತುಕತೆ - ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ

ರೈತ ಸಂಘಗಳ ಮುಖಂಡರೊಂದಿಗೆ ಇಂದು ಕೇಂದ್ರ ಸರ್ಕಾರ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದೆ. ಈವರೆಗೆ ಕೇಂದ್ರ ಸರ್ಕಾರ ಮತ್ತು ರೈತ ಸಂಘಗಳ ನಡುವೆ ಆರು ಸುತ್ತಿನ ಮಾತುಕತೆ ನಡೆದಿದ್ದು, ವಿಫಲಗೊಂಡಿದೆ.

Govt to hold seventh round of talks with farmer unions today
Govt to hold seventh round of talks with farmer unions today

By

Published : Jan 4, 2021, 6:45 AM IST

ನವದೆಹಲಿ: ಮೂರು ಕೃಷಿ ಕಾನೂನುಗಳ ವಿರುದ್ಧ ಒಂದು ತಿಂಗಳಿಗಿಂತಲೂ ಹೆಚ್ಚು ಕಾಲ ದೆಹಲಿಯ ವಿವಿಧ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳ ಮುಖಂಡರೊಂದಿಗೆ ಇಂದು ಕೇಂದ್ರ ಸರ್ಕಾರ ಏಳನೇ ಸುತ್ತಿನ ಮಾತುಕತೆ ನಡೆಸಲಿದೆ.

ಕೇಂದ್ರ ಕೃಷಿ ಸಚಿವ ಕೈಲಾಶ್ ಚೌಧರಿ ಮಾತುಕತೆಯಲ್ಲಿ ಪರಿಹಾರ ಕಂಡುಕೊಳ್ಳಲಾಗುವುದು ಮತ್ತು ಮೂರು ಕೃಷಿ ಕಾನೂನುಗಳ ವಿರುದ್ಧದ ಆಂದೋಲನವೂ ಕೊನೆಗೊಳ್ಳಬಹುದು ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಮಳೆ ತೀವ್ರ ಚಳಿಯ ಹೊರತಾಗಿಯೂ, ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ಆಂದೋಲನ ನಡೆಸುತ್ತಿರುವ ರೈತರು ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಕಳೆದ 39 ದಿನಗಳಿಂದ ಪ್ರತಿಭಟನೆ ನಡೆಸುತ್ತಲೇ ಇದ್ದಾರೆ.

ಈವರೆಗೆ ಕೇಂದ್ರ ಸರ್ಕಾರ ಮತ್ತು ರೈತ ಸಂಘಗಳ ನಡುವೆ ಆರು ಸುತ್ತಿನ ಮಾತುಕತೆ ನಡೆದಿದ್ದು, ಸೆಪ್ಟೆಂಬರ್‌ನಲ್ಲಿ ಸಂಸತ್ತು ಅಂಗೀಕರಿಸಿದ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ರೈತರು ಒತ್ತಾಯಿಸುತ್ತಿರುವುದರಿಂದ ಮಾತುಕತೆ ವಿಫಲವಾಗಿದೆ.

ABOUT THE AUTHOR

...view details