ವಿಶಾಖಪಟ್ಟಣಂ(ಆಂಧ್ರಪ್ರದೇಶ):ಮಹಿಳೆಯೋರ್ವಳು ವಿದ್ಯುತ್ ಟ್ರಾನ್ಸ್ಫಾರ್ಮರ್ ಹಿಡಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಪದೇರುವಿನಲ್ಲಿ ಈ ಪ್ರಕರಣ ನಡೆದಿರುವುದಾಗಿ ತಿಳಿದು ಬಂದಿದೆ.
ಕಳೆದ ಕೆಲ ದಿನಗಳ ಹಿಂದೆ ಕೊರೊನಾ ಸೋಂಕಿಗೊಳಗಾಗಿದ್ದ 36 ವರ್ಷದ ಪದ್ಮಲಕ್ಷ್ಮಿ ತದನಂತರ ಗುಣಮುಖರಾಗಿದ್ದರು. ಇವರ ಗಂಡ ಪ್ರಸಾದ್ ಶಾಲಾ ಶಿಕ್ಷಕರಾಗಿದ್ದರು. ಇಬ್ಬರು ಮಕ್ಕಳು ಹೊಂದಿರುವ ಇವರು ಪದೇರು ಗ್ರಾಮದಲ್ಲಿ ವಾಸವಾಗಿದ್ದರು. ಕೋವಿಡ್ ಸೋಂಕಿನಿಂದ ಗುಣಮುಖಳಾದ ಬಳಿಕ ಮಾನಸಿಕ ಖಿನ್ನತೆಗೊಳಗಾಗಿದ್ದು, ಅದರಿಂದ ಹೊರಬರಲು ಸಾಧ್ಯವಾಗಿರಲಿಲ್ಲ. ಇದೀಗ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.