ನವದೆಹಲಿ:ರಾಜ್ಯಗಳು ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವುದನ್ನು ಪರಿಗಣಿಸಬಹುದು ಎಂದು ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರದ ಪ್ರತಿಪಾದನೆ ಉಲ್ಲೇಖಿಸಿ,ಇದರ ಬಗ್ಗೆ ರಾಜ್ಯಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ. ತೃಣಮೂಲ ಕಾಂಗ್ರೆಸ್ ಸಂಸದೆ ಶಾಂತಾ ಛೆಟ್ರಿ ಈ ಸಂಬಂಧ ಮಾತನಾಡಿ, ಮೇಘಾಲಯದ ಹಿಂದೂಗಳಿಗೆ ಸಮುದಾಯದ ಅಲ್ಪಸಂಖ್ಯಾತ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಶೂನ್ಯ ವೇಳೆಯಲ್ಲಿ ಛೆಟ್ರಿ ಮಾತನಾಡಿ, ಸಮುದಾಯವು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಬಹುಸಂಖ್ಯಾತರಾಗಿಲ್ಲದಿದ್ದರೆ ರಾಜ್ಯ ಸರ್ಕಾರಗಳು ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ಬಗ್ಗೆ ಪರಿಗಣಿಸಬಹುದು ಎಂದು ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್‌ಗೆ ತಿಳಿಸಿದೆ ಎಂದು ಹೇಳಿದ್ದಾರೆ.