ಶ್ರೀನಗರ(ಜಮ್ಮು-ಕಾಶ್ಮೀರ):ಗಣರಾಜ್ಯೋತ್ಸವ ಆಚರಣೆ ಮುನ್ನಾ ದಿನವಾದ ಇಂದು ಜಮ್ಮು-ಕಾಶ್ಮೀರದಲ್ಲಿ ಉಗ್ರರು ಗ್ರೆನೇಡ್ ದಾಳಿ ನಡೆಸಿದ ಪರಿಣಾಮ ಮೂವರು ಯೋಧರು ಗಾಯಗೊಂಡಿರುವುದಾಗಿ ತಿಳಿದುಬಂದಿದೆ. ಶ್ರೀನಗರದ ಹರಿ ಸಿಂಗ್ ಹೈ ಸ್ಟ್ರೀಟ್ ಪ್ರದೇಶದಲ್ಲಿ ಇಂದು ಮಧ್ಯಾಹ್ನ ಈ ಘಟನೆ ನಡೆದಿದೆ.
ಭದ್ರತಾ ಸಿಬ್ಬಂದಿಯನ್ನ ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ. ಆದರೆ, ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ. ದಾಳಿ ಬೆನ್ನಲ್ಲೇ ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿರುವುದಾಗಿ ಭದ್ರತಾ ಪಡೆ ಮುಖ್ಯಸ್ಥ ಡಿ ಕೆ ಬೂರಾ ಮಾಹಿತಿ ನೀಡಿದ್ದಾರೆ.