ಕರ್ನಾಟಕ

karnataka

ETV Bharat / bharat

ಕೋವಿಡ್‌ 3ನೇ ಅಲೆ ತಡೆಯೋದು ನಿಮ್ಮದೇ ಜವಾಬ್ದಾರಿ: ಕೇಂದ್ರ ಆರೋಗ್ಯ ಸಚಿವಾಲಯ - ಲಾವ್‌ ಅಗರ್‌ವಾಲ್‌

ಕೋವಿಡ್‌ 3ನೇ ಅಲೆಯ ಆತಂಕದ ನಡುವೆಯೇ ದೇಶದ ವಿವಿಧೆಡೆ ಜನ ನಿರ್ಬಂಧಗಳನ್ನು ಉಲ್ಲಂಘಿಸುತ್ತಿರುವುದಕ್ಕೆ ಕೇಂದ್ರ ಆರೋಗ್ಯ ಸಚಿವಾಲಯ ಬೇಸರ ವ್ಯಕ್ತಪಡಿಸಿದೆ.

gross violations of covid appropriate behaviour being seen in parts of country
ಕೋವಿಡ್‌ 3ನೇ ಅಲೆ ತಡೆಯೋದು ನಿಮ್ಮದೆ ಜವಾಬ್ದಾರಿ; ಆರೋಗ್ಯ ಸಚಿವಾಲಯ

By

Published : Jul 13, 2021, 9:34 PM IST

ನವದೆಹಲಿ:ದೇಶದ ಅನೇಕ ಭಾಗಗಳಲ್ಲಿ ಜನರು ಕೋವಿಡ್‌ ನಿರ್ಬಂಧಗಳನ್ನು ಉಲ್ಲಂಘಿಸಿ ತಮ್ಮ ಇಷ್ಟದಂತೆ ತಿರುಗಾಡುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಕಳವಳ ವ್ಯಕ್ತಪಡಿಸಿದೆ. 3ನೇ ಅಲೆ ಬಾರದಿರುವಂತೆ ಜಾಗ್ರತೆ ವಹಿಸುವ ಜವಾಬ್ದಾರಿ ಜನರದ್ದೇ ಆಗಿದೆ ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಎಚ್ಚರಿಕೆ ನೀಡಿದ್ದಾರೆ.

ಕೋವಿಡ್ ತಡೆಗೆ ವಿಧಿಸಿರುವ ನಿಯಮಗಳನ್ನು ಪಾಲಿಸುವ ಬದಲು ಜನ ಅವುಗಳನ್ನು ಮರೆಯುತ್ತಿದ್ದಾರೆ. 3ನೇ ಅಲೆ ವಿರುದ್ಧ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯತೆಯ ಬಗ್ಗೆ ಜನರಿಗೆ ತಿಳಿಯದಿರುವುದು ವಿಷಾದಕರ ಎಂದು ಹೇಳಿದ್ದಾರೆ.

ಜುಲೈನಲ್ಲಿ ದೇಶದಲ್ಲಿ ದಾಖಲಾದ ಪ್ರಕರಣಗಳಲ್ಲಿ ಶೇಕಡಾ 73.4 ರಷ್ಟು ಪೈಕಿ ಕೇರಳ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಒಡಿಶಾದಿಂದಲೇ ದಾಖಲಾಗಿವೆ ಎಂದು ಲವ್ ಅಗರ್ವಾಲ್ ತಿಳಿಸಿದ್ದಾರೆ. ಈ ವಾರ 55 ಜಿಲ್ಲೆಗಳಲ್ಲಿ ಪಾಸಿಟಿವ್‌ ಪ್ರಮಾಣ ಶೇ 10 ಕ್ಕಿಂತ ಹೆಚ್ಚಾಗಿದೆ. ಪರಿಸ್ಥಿತಿ ಬಗ್ಗೆ ತಿಳಿಯಲು ಕೇಂದ್ರ ತಂಡಗಳನ್ನು ಮಹಾರಾಷ್ಟ್ರ, ಛತ್ತೀಸ್‌ಗಢ, ಅಸ್ಸೋಂ, ಮೇಘಾಲಯ, ಒಡಿಶಾ, ಮಿಜೋರಾಂ, ಅರುಣಾಚಲ ಪ್ರದೇಶ, ಮಣಿಪುರ, ನಾಗಾಲ್ಯಾಂಡ್ ಮತ್ತು ತ್ರಿಪುರಕ್ಕೆ ಕಳುಹಿಸಲಾಗಿದೆ ಎಂದರು.

ಈ ವಿಷಯದ ಬಗ್ಗೆ ಮಾತನಾಡಿದ ನೀತಿ ಆಯೋಗದ ಆರೋಗ್ಯ ವಿಭಾಗದ ಸದಸ್ಯ ಡಾ.ವಿ.ಕೆ ಪಾಲ್, ಕೊರೊನಾ ವೈರಸ್ 3ನೇ ಅಲೆ ಜಗತ್ತಿನ ಅನೇಕ ದೇಶಗಳಲ್ಲಿ ಏಕಾಏಕಿ ಕಾಣಿಸಿಕೊಂಡಿದೆ. ಭಾರತದಲ್ಲಿ ಈ ಪರಿಸ್ಥಿತಿ ಉದ್ಭವಿಸದಂತೆ ಎಚ್ಚರ ವಹಿಸುವುದು ಜನರ ಜವಾಬ್ದಾರಿಯಾಗಿದೆ ಎಂದು ಅವರು ನೆನಪಿಸಿದರು.

ಕೋವಿಡ್‌ನಿಂದಾಗಿ ದೇಶದಲ್ಲಿಂದು 2,020 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 4,10,784 ಕ್ಕೆ ಏರಿದೆ. 31,443 ಜನರಲ್ಲಿ ಹೊಸದಾಗಿ ವೈರಸ್ ಪತ್ತೆಯಾಗಿದೆ. ಒಟ್ಟು ಪ್ರಕರಣಗಳ ಸಂಖ್ಯೆ 3,09,05,819 ತಲುಪಿದೆ.

ABOUT THE AUTHOR

...view details