ನವದೆಹಲಿ:ದೇಶದಲ್ಲಿ ಪ್ರತಿದಿನ ಲಕ್ಷಾಂತರ ಕೋವಿಡ್ ಸೋಂಕಿತ ಪ್ರಕರಣ ದಾಖಲಾಗುತ್ತಿರುವುದು ಆತಂಕ ಮೂಡಿಸಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಕಳವಳ ವ್ಯಕ್ತಪಡಿಸಿದೆ. ಆದರೆ, ಕೋವಿಡ್ ವ್ಯಾಕ್ಸಿನ್ ಕೊರತೆ ಇಲ್ಲ ಎಂದು ಮತ್ತೊಮ್ಮೆ ಪುನರುಚ್ಚರಿಸಿದೆ.
ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿದ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ದೇಶದಲ್ಲಿ ಶೇ. 89.51ರಷ್ಟು ಕೋವಿಡ್ ಸೋಂಕಿತರು ಗುಣಮುಖರಾಗಿದ್ದು, ಶೇ. 1.25ರಷ್ಟು ಜನರು ಸಾವನ್ನಪ್ಪಿದ್ದಾರೆ. ಸದ್ಯ ದೇಶದಲ್ಲಿ 9.24ರಷ್ಟು ಕೋವಿಡ್ ಪ್ರಕರಣಗಳಿದ್ದು, ಈ ಹಿಂದಿನಗಿಂತಲೂ ಹೆಚ್ಚಿಗೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.
ಮಹಾರಾಷ್ಟ್ರ ವಿರುದ್ಧ ವಾಗ್ದಾಳಿ
ಅತಿ ಹೆಚ್ಚು ಕೋವಿಡ್ ಸೋಂಕಿತ ಪ್ರಕರಣ ಕಂಡು ಬರುತ್ತಿರುವ ಮಹಾರಾಷ್ಟ್ರದಲ್ಲಿ ಆರ್ಟಿ - ಪಿಸಿಆರ್ ಪರೀಕ್ಷೆ ಕಡಿಮೆ ಮಟ್ಟದಲ್ಲಿ ನಡೆಯುತ್ತಿದ್ದು, ಇದರಿಂದಲೇ ಅತಿ ಹೆಚ್ಚು ಸೋಂಕಿತ ಪ್ರಕರಣ ದಾಖಲಾಗುತ್ತಿವೆ ಎಂದಿದ್ದಾರೆ.
ಇಲ್ಲಿಯವರೆಗೆ 2,01,22,960 ಡೋಸ್ ನೀಡಲಾಗಿದ್ದು, ಇದರಲ್ಲಿ ಖರ್ಚು ಆಗಿದ್ದು 1,67,20,000 ಡೋಸ್ ಮಾತ್ರ ಎಂದು ಭೂಷಣ್ ತಿಳಿಸಿದ್ದು, ದೇಶದಲ್ಲಿ ಕೋವಿಡ್ ವ್ಯಾಕ್ಸಿನ್ ಕೊರತೆ ಇಲ್ಲ ಎಂಬುದದನ್ನ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ದೇಶದಲ್ಲಿ ಇಲ್ಲಿಯವರೆಗೆ 13,10,90,000 ಕೊರೊನಾ ವ್ಯಾಕ್ಸಿನ್ ನೀಡಲಾಗಿದ್ದು, ಅನೇಕ ರಾಜ್ಯಗಳು ಶೇ. 8ರಿಂದ 9ರಷ್ಟು ಕೋವಿಡ್ ಲಸಿಕೆ ಹಾಳು ಮಾಡಿವೆ ಎಂದಿದ್ದಾರೆ.