ಹೊಸದಿಲ್ಲಿ:ಗುಜರಾತ್ ವಿಧಾನಸಭೆಗೆ ನಡೆಯಲಿರುವ ಎರಡು ಹಂತದ ಚುನಾವಣೆಗೆ ಬಿಜೆಪಿ ಗುರುವಾರ ತನ್ನ 160 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರನ್ನು ಅವರ ಸ್ವಕ್ಷೇತ್ರ ಘಟ್ಲೋಡಿಯಾದಿಂದ ಕಣಕ್ಕಿಳಿಸಿದೆ ಮತ್ತು ಹಲವಾರು ಹಾಲಿ ಶಾಸಕರನ್ನು ಕೈಬಿಟ್ಟಿದೆ.
ಡಿಸೆಂಬರ್ 1 ರಂದು ಮೊದಲ ಹಂತದಲ್ಲಿ ಚುನಾವಣೆ ನಡೆಯಲಿರುವ 89 ಸ್ಥಾನಗಳ ಪೈಕಿ 84 ಸ್ಥಾನಗಳಿಗೆ ಮತ್ತು ಡಿಸೆಂಬರ್ 5 ರಂದು ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿರುವ 93 ಅಭ್ಯರ್ಥಿಗಳ ಪೈಕಿ 76 ಸ್ಥಾನಗಳಿಗೆ ಪಕ್ಷ ಅಭ್ಯರ್ಥಿಗಳನ್ನು ಹೆಸರಿಸಿದೆ.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಬುಧವಾರದ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾದ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದರು.