ಗುಜರಾತ್ :ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಐವರು ಗಾಯಗೊಂಡಿರುವ ಭೀಕರ ಘಟನೆ ಖೇಡಾ ಜಿಲ್ಲೆಯ ನಾಡಿಯಾಡ್ ಬಳಿ ನಡೆದಿದೆ. ಅಹಮದಾಬಾದ್ - ವಡೋದರಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಟ್ರಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ.
ಹೆದ್ದಾರಿಯ ಬದಿಯಲ್ಲಿ ನಿಲ್ಲಿಸಿದ್ದ ಟ್ರಕ್ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ರಾಜಸ್ಥಾನದ ಪಾಲಿ ಜಿಲ್ಲೆಯ ತಕ್ತ್ಗಢ ಗ್ರಾಮದ ಕುಟುಂಬ, ನಾಡಿಯಾಡ್ ತಾಲೂಕಿನ ಮಹೋಲೆಲ್ ಗ್ರಾಮದಲ್ಲಿ ವಾಸಿಸುತ್ತಿದ್ದರು.