ಕರ್ನಾಟಕ

karnataka

ETV Bharat / bharat

ಗುಜರಾತ್ ಸಿಎಂ ವಿಜಯ್ ರೂಪಾನಿಗೆ ಕೋವಿಡ್-​19 ದೃಢ

ಇಂದು ಯುಎನ್ ಮೆಹ್ತಾ ಆಸ್ಪತ್ರೆ ಆರೋಗ್ಯ ಬುಲೆಟಿನ್ ಹೊರಡಿಸಿದ್ದು, ವಿಜಯ್ ರೂಪಾನಿ ಅವರಿಗೆ ಕೊರೊನಾ ಸೋಂಕು ತಗುಲಿದೆ ಎಂದು ದೃಢಪಡಿಸಿದೆ..

Vijay Rupani
Vijay Rupani

By

Published : Feb 15, 2021, 2:32 PM IST

ಗುಜರಾತ್: ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿಗೆ ಕೋವಿಡ್​-19 ಸೋಂಕು ತಗುಲಿದೆ. ವಡೋದರಾದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ನಿನ್ನೆ ಸಭೆಯನ್ನುದ್ದೇಶಿಸಿ ಭಾಷಣ ಮಾಡುತ್ತಿರುವಾಗ ಸಿಎಂ ವಿಜಯ್​ ರೂಪಾನಿ ವೇದಿಕೆ ಮೇಲೆಯೇ ಕುಸಿದು ಬಿದ್ದಿದ್ದರು.

ಬಳಿಕ ಅವರನ್ನು ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಾಥಮಿಕ ಚಿಕಿತ್ಸೆಯ ಬಳಿಕ ಅವರು ಚೆನ್ನಾಗಿದ್ದಾರೆ, ಒತ್ತಡ ಮತ್ತು ಆಯಾಸದಿಂದ ಬಿಪಿ ಕಡಿಮೆಯಾಗಿ ಅವರು ಕುಸಿದು ಬಿದ್ದಿದ್ದಾರೆ ಎಂದು ವೈದ್ಯರು ತಿಳಿಸಿದ್ದರು.

ಇಂದು ಯುಎನ್ ಮೆಹ್ತಾ ಆಸ್ಪತ್ರೆ ಆರೋಗ್ಯ ಬುಲೆಟಿನ್ ಹೊರಡಿಸಿದ್ದು, ವಿಜಯ್ ರೂಪಾನಿ ಅವರಿಗೆ ಕೊರೊನಾ ಸೋಂಕು ತಗುಲಿದೆ ಎಂದು ದೃಢಪಡಿಸಿದೆ.

ABOUT THE AUTHOR

...view details