ನವದೆಹಲಿ:ಕಾಂಗ್ರೆಸ್ ಪಕ್ಷವು ಮುಂಬರುವ ಗುಜರಾತ್ ವಿಧಾನಸಭೆ ಚುನಾವಣೆಗೆ 39 ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ. ವಡ್ಗಾಮ್ ಕ್ಷೇತ್ರದಿಂದ ದಲಿತ ನಾಯಕ ಜಿಗ್ನೇಶ್ ಮೇವಾನಿ ಅವರನ್ನು ಕಣಕ್ಕಿಳಿಸಲಾಗಿದೆ. ಬನಸ್ಕಾಂತ ಜಿಲ್ಲೆಯ ವಡ್ಗಾಮ್ ಕ್ಷೇತ್ರದಿಂದ 2017ರಲ್ಲಿ ಇವರು ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದಿದ್ದರು.
ಕಾಂಗ್ರೆಸ್ ಈ ಎರಡೂ ಪಟ್ಟಿಗಳನ್ನು ಬಿಡುಗಡೆ ಮಾಡುವ ಮೂಲಕ ಇದುವರೆಗೆ ಒಟ್ಟು 142 ಅಭ್ಯರ್ಥಿಗಳನ್ನು ಚುನಾವಣಾ ಅಖಾಡಕ್ಕಿಳಿಸಿದಂತಾಗಿದೆ. ನವೆಂಬರ್ 4 ರಂದು ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು 43 ಅಭ್ಯರ್ಥಿಗಳ ಹೆಸರು ಪ್ರಕಟಿಸಿತ್ತು.