ಕರ್ನಾಟಕ

karnataka

By

Published : Nov 29, 2022, 12:46 PM IST

ETV Bharat / bharat

ಗುಜರಾತ್ ಮೊದಲ ಹಂತದ ಚುನಾವಣಾ ಪ್ರಚಾರ ಅಂತ್ಯ: 89 ಕ್ಷೇತ್ರಗಳಲ್ಲಿ ಡಿ.1 ರಂದು ಮತದಾನ

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ನಡ್ಡಾ ಮತ್ತು ಇತರ ಬಿಜೆಪಿ ನಾಯಕರು ಮೊದಲ ಹಂತದಲ್ಲಿ ಸ್ಪರ್ಧಿಸಿರುವ ತಮ್ಮ ಅಭ್ಯರ್ಥಿಗಳ ಪರವಾಗಿ ಈಗಾಗಲೇ ಹಲವಾರು ರ್ಯಾಲಿಗಳನ್ನು ನಡೆಸಿದ್ದಾರೆ. ಎಎಪಿಯ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ವ್ಯಾಪಕ ಪ್ರಚಾರ ಮಾಡಿದ್ದಾರೆ.

ಗುಜರಾತ್ ಮೊದಲ ಹಂತದ ಚುನಾವಣಾ ಪ್ರಚಾರ ಅಂತ್ಯ: 89 ಕ್ಷೇತ್ರಗಳಲ್ಲಿ ಡಿ.1 ರಂದು ಮತದಾನ
Last day of campaigning for 1st phase of Gujarat Assembly polls

ಅಹಮದಾಬಾದ್: ಗುಜರಾತ್‌ನ ಒಟ್ಟು 182 ಸ್ಥಾನಗಳ ಪೈಕಿ 89 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣಾ ಪ್ರಚಾರ ಇಂದು (ಮಂಗಳವಾರ) ಕೊನೆಗೊಳ್ಳಲಿದೆ. ಮೊದಲ ಹಂತದ ಚುನಾವಣೆ ಡಿಸೆಂಬರ್ 1 ರಂದು ನಡೆಯಲಿದೆ. ಉಳಿದ 93 ಸ್ಥಾನಗಳಿಗೆ ಡಿಸೆಂಬರ್ 5 ರಂದು ಮತದಾನ ನಿಗದಿಯಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಕ್ರಮವಾಗಿ ಭಾವನಗರ ಮತ್ತು ಗಾಂಧಿಧಾಮ್ (ಕಚ್ ಜಿಲ್ಲೆ) ನಲ್ಲಿ ಮಂಗಳವಾರ ಪ್ರಚಾರ ನಡೆಸಲಿದ್ದಾರೆ.

ಮೊದಲ ಹಂತ, ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು: ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಮಂತ್ರಿ ಅಭ್ಯರ್ಥಿ ಇಸುದನ್ ಗಧ್ವಿ ದ್ವಾರಕಾ ಜಿಲ್ಲೆಯ ಖಂಭಾಲಿಯಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಗುಜರಾತ್‌ನ ಮಾಜಿ ಸಚಿವ ಪುರುಶೋತ್ತಮ್ ಸೋಲಂಕಿ, ಆರು ಬಾರಿ ಶಾಸಕರಾಗಿರುವ ಕುನ್ವರ್ಜಿ ಬವಲಿಯಾ, ಮೊರ್ಬಿ 'ಹೀರೋ' ಕಾಂತಿಲಾಲ್ ಅಮೃತೀಯ, ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಮತ್ತು ಗುಜರಾತ್ ಎಎಪಿ ಅಧ್ಯಕ್ಷ ಗೋಪಾಲ್ ಇಟಾಲಿಯಾ ಚುನಾವಣೆಯ ಮೊದಲ ಹಂತದ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳಲ್ಲಿ ಸೇರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ನಡ್ಡಾ ಮತ್ತು ಇತರ ಬಿಜೆಪಿ ನಾಯಕರು ಮೊದಲ ಹಂತದಲ್ಲಿ ಸ್ಪರ್ಧಿಸಿರುವ ತಮ್ಮ ಅಭ್ಯರ್ಥಿಗಳ ಪರವಾಗಿ ಈಗಾಗಲೇ ಹಲವಾರು ಚುನಾವಣಾ ಭಾಷಣಗಳನ್ನು ನಡೆಸಿದ್ದಾರೆ. ಎಎಪಿಯ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ವ್ಯಾಪಕ ಪ್ರಚಾರ ಮಾಡಿದ್ದಾರೆ. ಈ ಬಾರಿ ಗುಜರಾತ್​ನಲ್ಲಿ ಅಧಿಕಾರಕ್ಕೆ ಬಂದರೆ ಹಲವಾರು ಉಚಿತ ಕೊಡುಗೆಗಳನ್ನು ಜಾರಿ ಮಾಡುವುದಾಗಿ ಕೇಜ್ರಿವಾಲ್ ಜನರಿಗೆ ಭರವಸೆಗಳನ್ನು ನೀಡಿದ್ದಾರೆ.

ಕಾಂಗ್ರೆಸ್‌ನಿಂದ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ಮಾಡಿದ ಪ್ರಮುಖರಾಗಿದ್ದಾರೆ. ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಡಿಸೆಂಬರ್ 5 ರಂದು ಎರಡನೇ ಹಂತದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿಗಳ ಪರವಾಗಿ ರಾಜ್ಯದಲ್ಲಿ ಪ್ರಚಾರ ನಡೆಸಲಿದ್ದಾರೆ.

ಇದನ್ನೂ ಓದಿ: 'ಕಾಂಗ್ರೆಸ್​ಗೆ ಮತ ನೀಡಿದ್ರೆ ವ್ಯರ್ಥ...': ಗುಜರಾತ್​ನಲ್ಲಿ ಸರ್ಕಾರ ರಚಿಸುವ ಭರವಸೆಯಲ್ಲಿ ಕೇಜ್ರಿವಾಲ್​​​

ABOUT THE AUTHOR

...view details