ಅಹ್ಮದಾಬಾದ್ (ಗುಜರಾತ್):ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ 20 ನಗರಗಳಲ್ಲಿ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಿ ಸರ್ಕಾರ ಘೋಷಿಸಿದೆ. ಇಂದಿನಿಂದ ಏಪ್ರಿಲ್ 30 ರವರೆಗೆ ಈ ನಿಯಮ ಜಾರಿಯಲ್ಲಿರಲಿದೆ.
ರಾಜ್ಯದಲ್ಲಿ ಕೋವಿಡ್ -19 ಪರಿಸ್ಥಿತಿ ನಿಯಂತ್ರಣ ಕುರಿತು ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ಗುಜರಾತ್ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. ಅದೇ ಸಮಯದಲ್ಲಿ, ವೈರಸ್ ಸೋಂಕಿನ ಸರಪಳಿಯನ್ನು ಮುರಿಯಲು ಕರ್ಫ್ಯೂ ಅಥವಾ ಲಾಕ್ಡೌನ್ ಅನ್ನು ಮೂರು-ನಾಲ್ಕು ದಿನಗಳವರೆಗೆ ಜಾರಿಗೊಳಿಸಬಹುದು ಎಂದು ನ್ಯಾಯಾಲಯ ಸೂಚಿಸಿತ್ತು.