ಗಾಂಧಿನಗರ:ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಆಪ್, ಕಾಂಗ್ರೆಸ್ನ ಘಟಾನುಘಟಿ ನಾಯಕರು ಗೆಲುವು ಸಾಧಿಸಿದ್ದಾರೆ. ಆದರೆ, ಆಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿ ಇಸುದನ್ ಗಧ್ವಿ ಸೋಲು ಕಂಡಿದ್ದಾರೆ.
ಒಟ್ಟಾರೆ 182 ಸದಸ್ಯ ಬಲದ ಗುಜರಾತ್ ವಿಧಾನಸಭೆಯಲ್ಲಿ 156 ಕ್ಷೇತ್ರಗಳು ಗೆದ್ದು ಬಿಜೆಪಿ ಪ್ರಚಂಡ ಬಹುಮತ ಪಡೆದಿದೆ. ಕಾಂಗ್ರೆಸ್ 17 ಸ್ಥಾನಕ್ಕೆ ಕುಸಿದಿದೆ. ಆಮ್ ಆದ್ಮಿ ಪಕ್ಷ 5 ಸ್ಥಾನಗಳು ಹಾಗೂ ಮೂವರು ಪಕ್ಷೇತರರು ಜಯ ದಾಖಲಿಸಿದ್ದಾರೆ.
ಹಾಲಿ ಸಿಎಂ ಭೂಪೇಂದ್ರ ಪಟೇಲ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಜಿಗ್ನೇಶ್ ಮೇವಾನಿ ಮತ್ತೊಮ್ಮೆ ಗೆಲುವು ಸಾಧಿಸಿದ್ದಾರೆ. ಆಪ್ ಸಿಎಂ ಅಭ್ಯರ್ಥಿ ಇಸುದನ್ ಗಧ್ವಿ 1900 ಮತಗಳಿಂದ ಸೋತಿದ್ದಾರೆ. ಪಟೇಲ್ ಹೋರಾಟದ ಮೂಲಕ ಮುನ್ನೆಲೆಗೆ ಬಂದಿದ್ದ ಬಿಜೆಪಿಯ ಹಾರ್ದಿಕ್ ಪಟೇಲ್ 50 ಸಾವಿರ ಮತಗಳಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಮತ್ತೊಬ್ಬ ಬಿಜೆಪಿ ನಾಯಕ ಅಲ್ಪೇಶ್ ಠಾಕೂರ್ ಸಹ ಜಯ ದಾಖಲಿಸಿದ್ದಾರೆ. ಕ್ರಿಕೆಟರ್ ರವೀಂದ್ರ ಜಡೇಜಾ ಅವರ ಪತ್ನಿ, ಬಿಜೆಪಿಯ ರಿವಾಬಾ ಜಡೇಜಾ ಸಹ ಗೆಲುವು ಸಾಧಿಸುವ ಮೂಲಕ ವಿಧಾನಸಭೆಗೆ ಪ್ರವೇಶ ಪಡೆದಿದ್ದಾರೆ.
ಓದಿ:ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆ.. ಈ ಬಾರಿಯೂ ಬದಲಾಗುತ್ತಾ ಅಧಿಕಾರ ಸೂತ್ರ?