ಕರ್ನಾಟಕ

karnataka

ETV Bharat / bharat

ಪಾಕ್​ನಿಂದ ಒಳನುಸುಳಿದ ಉಗ್ರರು; ಭದ್ರತಾ ಪಡೆಗಳಿಂದ ಶೋಧ ಕಾರ್ಯ, ಗುಂಡಿನ ಚಕಮಕಿ - ಶೋಧ ಕಾರ್ಯಾಚರಣೆ

ಜಮ್ಮು ಕಾಶ್ಮೀರದ ಪೂಂಚ್​ ಜಿಲ್ಲೆಯಲ್ಲಿ ಒಳನುಸುಳಿರುವ ಉಗ್ರರ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಗುಂಡಿನ ಚಕಮಕಿ ನಡೆಯುತ್ತಿದೆ.

ಪಾಕ್​ನಿಂದ ಒಳನುಸುಳಿದ ಉಗ್ರರು
ಪಾಕ್​ನಿಂದ ಒಳನುಸುಳಿದ ಉಗ್ರರು

By

Published : Jul 17, 2023, 8:35 PM IST

ಪೂಂಚ್​(ಜಮ್ಮು-ಕಾಶ್ಮೀರ):ಜಮ್ಮು ಕಾಶ್ಮೀರದ ಪೂಂಚ್​​ ಜಿಲ್ಲೆಯಲ್ಲಿ ಎರಡೇ ದಿನದಲ್ಲಿ ಮತ್ತೊಮ್ಮೆ ಗುಂಡಿನ ಮೊರೆತ ಕೇಳಿ ಬಂದಿದೆ. ಪಾಕಿಸ್ತಾನದಿಂದ ಉಗ್ರರು ಭಾರತದೊಳಗೆ ನುಸುಳುತ್ತಿದ್ದಾರೆ ಎಂದು ಮಾಹಿತಿ ತಿಳಿದ ಭದ್ರತಾ ಪಡೆಗಳು ಮತ್ತು ಪೊಲೀಸ್​ ಸಿಬ್ಬಂದಿ ಜಂಟಿ ಕಾರ್ಯಾಚರಣೆಗೆ ಇಳಿದಿದ್ದು, ಉಗ್ರರ ಮೇಲೆ ಗುಂಡಿನ ದಾಳಿ ನಡೆಸಲಾಗುತ್ತಿದೆ.

ಪೂಂಚ್‌ ಜಿಲ್ಲೆಯ ಸುರನ್‌ಕೋಟೆ ಪ್ರದೇಶದಲ್ಲಿ ಉಗ್ರರು ಒಳನುಸುಳುವಿಕೆ ನಡೆಸಿದ್ದು, ಸೇನೆ ಮತ್ತು ಪೊಲೀಸರು ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸುರನ್‌ಕೋಟೆಯ ಸಿಂದಾರಾ ಮತ್ತು ಮೈದಾನ್​ ಎಂಬಲ್ಲಿ ಈ ಕಾರ್ಯಾಚರಣೆ ನಡೆಸಲಾಗುತ್ತಿದೆ. ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರಿದಿವೆ. ಕಾರ್ಯಾಚರಣೆಗಳು ಪ್ರಗತಿಯಲ್ಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಈ ಪ್ರದೇಶದಲ್ಲಿ ಒಳನುಸುಳಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿತ್ತು. ಸದ್ಯದ ಘಟನೆಯ ಬಗ್ಗೆ ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ಹಂಚಿಕೊಳ್ಳಲಾಗುವುದು.

ಇದನ್ನೂ ಓದಿ;Militants killed: ಜಮ್ಮು ಕಾಶ್ಮೀರದ ಕುಪ್ವಾರದಲ್ಲಿ ಭದ್ರತಾ ಪಡೆಗಳಿಂದ ಇಬ್ಬರು ಉಗ್ರರ ಹತ್ಯೆ

ABOUT THE AUTHOR

...view details