ಕರ್ನಾಟಕ

karnataka

ETV Bharat / bharat

ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಕಾಳಗ : ಮೂವರು ಪಾಕಿಸ್ತಾನಿ ಉಗ್ರರ ಎನ್​ಕೌಂಟರ್​ - ಪಾಕಿಸ್ತಾನದ ಮೂವರು ಭಯೋತ್ಪಾದಕರ ಹತ

ಬಾರಾಮುಲ್ಲಾ ಜಿಲ್ಲೆಯ ಕ್ರೀರಿ ಸಮೀಪದ ನಾಜಿಭಟ್​ ಪ್ರದೇಶದಲ್ಲಿ ಈ ಗುಂಡಿನ ಕಾಳಗ ನಡೆಯುತ್ತಿದೆ. ಇಲ್ಲಿ ಉಗ್ರರು ಅಡಗಿದ್ದಾರೆ ಎಂಬ ಮಾಹಿತಿ ಮೇರೆಗೆ ಭಾರತೀಯ ಸೇನೆ, ಸಿಆರ್​ಪಿಎಫ್​ ಮತ್ತು ಜಮ್ಮು-ಕಾಶ್ಮೀರದ ಪೊಲೀಸರು ಜಂಟಿ ಕಾರ್ಯಾಚರಣೆ ಆರಂಭಿಸಿದ್ದರು..

Three Pakistani terrorists killed
ಮೂವರು ಪಾಕಿಸ್ತಾನಿ ಉಗ್ರರ ಎನ್​ಕೌಂಟರ್​

By

Published : May 25, 2022, 12:05 PM IST

ಶ್ರೀನಗರ(ಜಮ್ಮು-ಕಾಶ್ಮೀರ) :ಕಣಿವೆ ನಾಡು ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಕಾಳಗ ನಡೆಯುತ್ತಿದ್ದು, ಪಾಕಿಸ್ತಾನದ ಮೂವರು ಭಯೋತ್ಪಾದಕರನ್ನು ಭಾರತೀಯ ಸೈನಿಕರು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ಧಾರೆ. ಇದೇ ಗುಂಡಿನ ಚಕಮಕಿಯಲ್ಲಿ ಓರ್ವ ಪೊಲೀಸ್​ ಹುತಾತ್ಮರಾಗಿದ್ಧಾರೆ.

ಬಾರಾಮುಲ್ಲಾ ಜಿಲ್ಲೆಯ ಕ್ರೀರಿ ಸಮೀಪದ ನಾಜಿಭಟ್​ ಪ್ರದೇಶದಲ್ಲಿ ಈ ಗುಂಡಿನ ಕಾಳಗ ನಡೆಯುತ್ತಿದೆ. ಇಲ್ಲಿ ಉಗ್ರರು ಅಡಗಿದ್ದಾರೆ ಎಂಬ ಮಾಹಿತಿ ಮೇರೆಗೆ ಭಾರತೀಯ ಸೇನೆ, ಸಿಆರ್​ಪಿಎಫ್​ ಮತ್ತು ಜಮ್ಮು-ಕಾಶ್ಮೀರದ ಪೊಲೀಸರು ಜಂಟಿ ಕಾರ್ಯಾಚರಣೆ ಆರಂಭಿಸಿದ್ದರು.

ಈ ವೇಳೆ ಎರಡು ಕಡೆಗಳಿಂದ ಎನ್​ಕೌಂಟರ್​ ಶುರುವಾಗಿದೆ. ಇದರಲ್ಲಿ ಮೂವರು ಪಾಕಿಸ್ತಾನಿ ಉಗ್ರರ ಹಡೆಮುರಿಯನ್ನು ಭದ್ರತಾ ಸಿಬ್ಬಂದಿ ಕಟ್ಟಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಪೊಲೀಸ್​ ಸಿಬ್ಬಂದಿ ಹುತಾತ್ಮರಾಗಿದ್ಧಾರೆ. ಹತ ಉಗ್ರರಿಗೆ ಸೇರಿದ ಶಸ್ತ್ರಾಸ್ತ್ರ ಮತ್ತು ಮದ್ದು-ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಕಾಶ್ಮೀರದ ಐಜಿಪಿ ವಿಜಯ್​ ಕುಮಾರ್​ ತಿಳಿಸಿದ್ಧಾರೆ.

ಇದನ್ನೂ ಓದಿ:ಟೂರಿಸ್ಟ್ ಬಸ್ ಪಲ್ಟಿಯಾಗಿ 6 ​​ಮಂದಿ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

ABOUT THE AUTHOR

...view details