ಕರ್ನಾಟಕ

karnataka

ETV Bharat / bharat

4 ರಾಜ್ಯಕ್ಕೆ ರಾಜ್ಯಪಾಲರ ನೇಮಕ ಮಾಡಿ ಆದೇಶ ಹೊರಡಿಸಿದ ರಾಮನಾಥ್ ಕೋವಿಂದ್ - ಉತ್ತರಾಖಂಡ್ ರಾಜ್ಯಪಾಲ ಬೇಬಿ ರಾಣಿ ಮೌರ್ಯ

ತಮಿಳುನಾಡು, ಉತ್ತರಾಖಂಡ್, ಪಂಜಾಬ್ ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಕವಾಗಿದೆ. ನಾಗಲ್ಯಾಂಡ್ ರಾಜ್ಯಕ್ಕೆ ಉಸ್ತುವಾರಿ ರಾಜ್ಯಪಾಲರನ್ನ ಕೂಡ ನೇಮಕ ಮಾಡಲಾಗಿದೆ.

4 ರಾಜ್ಯಕ್ಕೆ ರಾಜ್ಯಪಾಲರ ನೇಮಕ ಮಾಡಿ ಆದೇಶ ಹೊರಡಿಸಿದ ರಾಮನಾಥ್ ಕೋವಿಂದ್
4 ರಾಜ್ಯಕ್ಕೆ ರಾಜ್ಯಪಾಲರ ನೇಮಕ ಮಾಡಿ ಆದೇಶ ಹೊರಡಿಸಿದ ರಾಮನಾಥ್ ಕೋವಿಂದ್

By

Published : Sep 10, 2021, 5:10 AM IST

ನವದೆಹಲಿ: ಉತ್ತರಾಖಂಡ್ ರಾಜ್ಯಪಾಲ ಬೇಬಿ ರಾಣಿ ಮೌರ್ಯ ಅವರು ತಮ್ಮ ರಾಜೀನಾಮೆಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಸಲ್ಲಿಸಿದ ಒಂದು ದಿನದ ನಂತರ, ಲೆಫ್ಟಿನೆಂಟ್ ಜನರಲ್ ಗುರ್ಮಿತ್ ಸಿಂಗ್ ಅವರನ್ನು ಉತ್ತರಾಖಂಡದ ರಾಜ್ಯಪಾಲರಾಗಿ ನೇಮಿಸಲಾಗಿದೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆದೇಶ ಹೊರಡಿಸಿದ್ದು, ತಮಿಳುನಾಡು, ಉತ್ತರಾಖಂಡ್, ಪಂಜಾಬ್ ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಕವಾಗಿದೆ. ನಾಗಲ್ಯಾಂಡ್ ರಾಜ್ಯಕ್ಕೆ ಉಸ್ತುವಾರಿ ರಾಜ್ಯಪಾಲರ ಕೂಡ ನೇಮಕವಾಗಿದೆ.

ನಾಗಲ್ಯಾಂಡ್ ರಾಜ್ಯದ ಮಾಜಿ ರಾಜ್ಯಪಾಲ ಆರ್. ಎನ್. ರವಿ ತಮಿಳುನಾಡಿನ ನೂತನ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ. ತಮಿಳುನಾಡು ರಾಜ್ಯಪಾಲರಾಗಿದ್ದ ಬನ್ವರಿಲಾಲ್ ಪುರೋಹಿತ್ ಪಂಜಾಬ್ ರಾಜ್ಯದ ರಾಜ್ಯಪಾಲರಾಗಿ ನೇಮಕವಾಗಿದ್ದಾರೆ ಅಸ್ಸೋಂ ರಾಜ್ಯಪಾಲ ಪ್ರೊ. ಜಗದೀಶ್ ಮುಖಿ ನಾಗಾಲ್ಯಾಂಡ್‌ನ ಉಸ್ತುವಾರಿ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ.

ABOUT THE AUTHOR

...view details