ಕೋಲ್ಕತ್ತಾ:ಗುವಾಹಟಿ-ಬಿಕಾನೇರ್ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿ ಭಾರಿ ಅವಘಡ ಸಂಭವಿಸಿದ ಘಟನೆ ಇಂದು ಸಂಜೆ 5 ಗಂಟೆಯ ಸುಮಾರಿಗೆ ನಡೆದಿದೆ. ಈ ದುರ್ಘಟನೆಯಲ್ಲಿ ಸದ್ಯಕ್ಕೆ ಲಭ್ಯವಾದ ಮಾಹಿತಿ ಪ್ರಕಾರ, ಐವರು ಸಾವನ್ನಪ್ಪಿ 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಪ.ಬಂಗಾಳದ ಡೊಮೊಹಾನಿ ಎಂಬಲ್ಲಿ ತೆರಳುತ್ತಿದ್ದಾಗ ರೈಲು ಹಳಿ ತಪ್ಪಿದ್ದು ಬೋಗಿಗಳು ಚೆಲ್ಲಾಪಿಲ್ಲಿಯಾಗಿವೆ. ದುರ್ಘಟನೆಯಲ್ಲಿ 12 ಬೋಗಿಗಳು ಹಾನಿಗೀಡಾಗಿವೆ. ಘಟನೆಯ ಮಾಹಿತಿ ಪಡೆದ ಡಿಆರ್ಎಂ ಮತ್ತು ಎಡಿಆರ್ಎಂ ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ರೈಲಿನಡಿ ಹಲವರು ಸಿಲುಕಿದ್ದಾರೆ ಎನ್ನಲಾಗುತ್ತಿದೆ. ರಕ್ಷಣಾ ಪಡೆ ಸಿಬ್ಬಂದಿ ತ್ವರಿತ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಉನ್ನತ ಮಟ್ಟದ ತನಿಖೆಗೆ ಆದೇಶ:
ಇದೇ ವೇಳೆ, ದುರ್ಘಟನೆಯಿಂದ ತಕ್ಷಣ ಎಚ್ಚೆತ್ತುಕೊಂಡಿರುವ ರೈಲ್ವೇ ಇಲಾಖೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ.