ಗ್ವಾಲಿಯರ್(ಮಧ್ಯಪ್ರದೇಶ):ಬೇರೊಂದು ಧರ್ಮಕ್ಕೆ ಮತಾಂತರಗೊಂಡು ವಿವಾಹವಾಗಿ ಧಾರ್ಮಿಕ ಸಂಸ್ಥೆಗಳಿಂದ ಪ್ರಮಾಣ ಪತ್ರ ಪಡೆಯುವ ಕುರಿತು ಗ್ವಾಲಿಯರ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪುರುಷ ಅಥವಾ ಮಹಿಳೆಯ ಧರ್ಮವನ್ನು ಬದಲಾಯಿಸುವ ಹಕ್ಕು ಯಾವುದೇ ಧಾರ್ಮಿಕ ಸಂಸ್ಥೆಗಳಿಗೆ ಇಲ್ಲ ಎಂದು ಹೈಕೋರ್ಟ್ ಆದೇಶದಲ್ಲಿ ಹೇಳಿದೆ.
ಧರ್ಮಾಂತರ ಬಯಸುವವರು ಜಿಲ್ಲಾಧಿಕಾರಿಗೆ ಕಡ್ಡಾಯವಾಗಿ ಅರ್ಜಿ ಸಲ್ಲಿಸಬೇಕು. ಹಕ್ಕು ಮತ್ತು ಆಕ್ಷೇಪಣೆಗಳನ್ನು ಆಲಿಸಿದ ನಂತರವೇ ಮತಾಂತರಕ್ಕೆ ಜಿಲ್ಲಾಧಿಕಾರಿ ಅನುಮತಿ ನೀಡಬೇಕು. ಆಗ ಮಾತ್ರ ಮತಾಂತರ ಸಿಂಧುವಾಗುತ್ತದೆ. ಯಾವುದೇ ಧಾರ್ಮಿಕ ಸಂಸ್ಥೆಗಳು ಯಾರನ್ನೂ ಬೇರೊಂದು ಧರ್ಮಕ್ಕೆ ಪರಿವರ್ತಿಸುವ ಹಕ್ಕಿಲ್ಲ ಎಂದು ಮಹತ್ವದ ಆದೇಶ ನೀಡಿದೆ.
ಪ್ರಕರಣವೇನು?:ಗ್ವಾಲಿಯರ್ ನಿವಾಸಿಯಾದ ಮುಸ್ಲಿಂ ಯುವತಿಯೊಬ್ಬಳು ಆರ್ಯ ಸಮಾಜದಲ್ಲಿ ತನ್ನ ಹಿಂದೂ ಧರ್ಮದ ಪ್ರಿಯತಮನ ಜೊತೆಗೂಡಿ ಆತನ ಧರ್ಮಕ್ಕೆ ಮತಾಂತರಗೊಂಡು ವಿವಾಹವಾಗಿದ್ದರು. ಅಲ್ಲಿಯೇ ವಿವಾಹ ಪ್ರಮಾಣಪತ್ರ ಪಡೆದಿದ್ದರು. ಇದರ ವಿರುದ್ಧ ಯುವತಿಯ ಕುಟುಂಬಸ್ಥರು ದೂರು ದಾಖಲಿಸಿದ್ದರು.