ವಾರಾಣಸಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ವಾರಾಣಸಿಯ ಜ್ಞಾನವಾಪಿ ಮಸೀದಿ ಆವರಣದಲ್ಲಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಮುಂದೂಡಿಕೆಯಾಗಿದೆ. ವಾರಾಣಸಿಯ ತ್ವರಿತ ನ್ಯಾಯಾಲಯದ ನ್ಯಾಯಾಧೀಶರು ಇಂದು ಹಾಜರಾಗದ ಕಾರಣ ವಿಚಾರಣೆಯನ್ನು ನವೆಂಬರ್ 14ಕ್ಕೆ ಮುಂದೂಡಲಾಗಿದೆ.
ಜ್ಞಾನವಾಪಿ ಆವರಣದಲ್ಲಿ ವಿಶ್ವೇಶ್ವರನ ಪ್ರಾರ್ಥನೆಗೆ ಅನುಮತಿ ನೀಡಬೇಕು ಮತ್ತು ಸಂಪೂರ್ಣ ಜ್ಞಾನವಾಪಿ ಸಂಕೀರ್ಣವನ್ನು ಹಿಂದೂಗಳಿಗೆ ಹಸ್ತಾಂತರಿಸಬೇಕು ಹಾಗೂ ಮುಸ್ಲಿಮರ ಪ್ರವೇಶವನ್ನು ನಿಷೇಧಿಸುವುದು ಸೇರಿದಂತೆ ಮೂರು ಪ್ರಮುಖ ಬೇಡಿಕೆಗಳ ಕುರಿತು ಅರ್ಜಿಗಳನ್ನು ಸಲ್ಲಿಸಲಾಗಿದೆ. ನ್ಯಾಯಾಲಯವು ಇಂದು ತೀರ್ಪು ನೀಡುವ ನಿರೀಕ್ಷೆ ಇತ್ತು.