ವಾರಾಣಸಿ:ಜ್ಞಾನವಾಪಿ ಮಸೀದಿ ಪ್ರಕರಣ ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ. ಮಸೀದಿಯಲ್ಲಿ ಪತ್ತೆಯಾದ ಶೃಂಗಾರಗೌರಿಗೆ ಪೂಜೆ ಸಲ್ಲಿಸಲು ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ವಾರಾಣಸಿ ಜಿಲ್ಲಾ ನ್ಯಾಯಾಲಯದ ಒಪ್ಪಿದ್ದು, ಇದನ್ನು ಮಸೀದಿ ಪರ ಪಕ್ಷಗಾರರು ವಿರೋಧಿಸಿದ್ದಾರೆ. ಜಿಲ್ಲಾ ಕೋರ್ಟ್ ವಿರುದ್ಧ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಗೆ ಮಸೀದಿ ಸಮಿತಿ ಮುಂದಾಗಿದ್ದು, ಇದರ ವಿರುದ್ಧವೂ ಅರ್ಜಿ ಸಲ್ಲಿಸಲು ಹಿಂದು ಪಕ್ಷಗಾರರು ಸಿದ್ಧತೆ ನಡೆಸಿದ್ದಾರೆ.
ವಾರಾಣಸಿ ಜಿಲ್ಲಾ ನ್ಯಾಯಾಧೀಶರ ಆದೇಶದ ವಿರುದ್ಧ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯು ಅಲಹಾಬಾದ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಿದೆ. ಮಸೀದಿ ಸಮಿತಿಯ ಅರ್ಜಿಗೂ ಮುನ್ನವೇ ಹಿಂದುಪರರು ಹೈಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.
ನಾಳೆ(ಬುಧವಾರ) ಹೈಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಲಾಗುವುದು. ಮಸೀದಿ ಸಮಿತಿಯು ಹೈಕೋರ್ಟ್‌ಗೆ ಹೋಗಲಿದ್ದು, ಅವರಿಗಿಂತ ಮುಂಚಿತವಾಗಿ ಹಿಂದು ಪಕ್ಷಗಾರರ ಪರವಾಗಿ ಕೇವಿಯಟ್ ಸಲ್ಲಿಸಲಾಗುವುದು ಎಂದು ಹಿಂದೂ ಪರ ವಕೀಲ ಸುಧೀರ್ ತ್ರಿಪಾಠಿ ಮಂಗಳವಾರ ತಿಳಿಸಿದರು.