ವಾರಣಾಸಿ(ಉತ್ತರ ಪ್ರದೇಶ):ಜ್ಞಾನವಾಪಿ-ಶೃಂಗಾರ್ ಗೌರಿ ಪ್ರಕರಣದ ವಿಚಾರಣೆ ನಡೆಸಿದ್ದ, ಮಸೀದಿ ಸಮೀಕ್ಷೆಗೆ ಸೂಚಿಸಿದ್ದ ಸಿವಿಲ್ ನ್ಯಾಯಾಧೀಶರಿಗೆ ಅಪರಿಚಿತ ಕರೆಗಳು ನಿಂತಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿರುವ ಮಧ್ಯೆಯೇ ಇಂಟರ್ನೆಟ್ ಕಾಲ್ ಮೂಲಕ ಮತ್ತೊಂದು ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ತನಿಖೆ ನಡೆಸಲು ನ್ಯಾಯಾಧೀಶರು ಪೊಲೀಸ್ ಇಲಾಖೆಗೆ ಪತ್ರ ಬರೆದಿದ್ದಾರೆ.
ಹಿರಿಯ ಸಿವಿಲ್ ನ್ಯಾಯಾಧೀಶ ರವಿಕುಮಾರ್ ದಿವಾಕರ್ ಅವರು ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ಆದೇಶಿಸಿದ್ದರು. ಆಗಿನಿಂದ ಅವರಿಗೆ ಬೆದರಿಕೆ ಕರೆಗಳು ಬರುತ್ತಿವೆ. ಮೇ 29 ರಂದು ಇಂಟರ್ನೆಟ್ ಕಾಲ್ ಮೂಲಕ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿ, ವಾರಣಾಸಿ ಪೊಲೀಸ್ ಆಯುಕ್ತರಿಗೆ ಅವರು ಲಿಖಿತ ದೂರು ನೀಡಿದ್ದಾರೆ.