ವಸಈ (ಮಹಾರಾಷ್ಟ್ರ):ಪಶ್ಚಿಮ ರೈಲ್ವೆ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿಯೊಬ್ಬರಿಗೆ ಹಿರಿಯ ಅಧಿಕಾರಿಗಳು ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ ಕುರಿತು ರೈಲ್ವೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಈ ಸಂಬಂಧ ಹಿರಿಯ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪಶ್ಚಿಮ ರೈಲ್ವೆಯಲ್ಲಿ ಮಹಿಳಾ ಸಿಬ್ಬಂದಿಗೆ ಕಿರುಕುಳ ಆರೋಪ, ಹಿರಿಯ ಅಧಿಕಾರಿ ಬಂಧನ - ಮಹಾರಾಷ್ಟ್ರದಲ್ಲಿ ಪಶ್ಚಿಮ ರೈಲ್ವೆ ಇಲಾಖೆಯಲ್ಲಿ ಹಿರಿಯ ಅಧಿಕಾರಿ ಬಂಧನ
ಪಶ್ಚಿಮ ರೈಲ್ವೆ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿಗೆ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಹಿರಿಯ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪಶ್ಚಿಮ ರೈಲ್ವೆಯ ಸಿಗ್ನಲ್ ವಿಭಾಗದಲ್ಲಿ ಕೆಲಸ ಮಾಡುವ 35 ವರ್ಷದ ಮಹಿಳೆ ತನ್ನ ಹಿರಿಯ ಅಧಿಕಾರಿಯಿಂದ ದೈಹಿಕ ಮತ್ತು ಮಾನಸಿಕ ಕಿರುಕುಳ ನಡೆದಿದೆ ಎಂದು ಆರೋಪಿಸಿದ್ದಾರೆ. ಮಹಿಳೆಯ ದೂರಿನ ಮೇರೆಗೆ ವಾಸೈ ರೈಲ್ವೆ ಪೊಲೀಸರು ಅಧಿಕಾರಿಯ ವಿರುದ್ಧ ಪ್ರಕರಣ ದಾಖಲಿಸಿದ್ದು, ಆತನನ್ನು ಬಂಧಿಸಿದ್ದಾರೆ.
ಬಂಧಿತ ಅಧಿಕಾರಿ ರಾಜೀವ್ ಕುಮಾರ್ ಮಂಡಲ್ ವಿರುದ್ಧ ಸಂತ್ರಸ್ತೆ ನೀಡಿರುವ ದೂರಿನಲ್ಲಿ ಕಳೆದ ಎಂಟು ವರ್ಷಗಳಿಂದ ಆಕೆಗೆ ಮೇಲಧಿಕಾರಿಗಳಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿ ಕಿರುಕುಳ ನೀಡಲಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಮಹಿಳೆ ತನ್ನ ಉನ್ನತ ಅಧಿಕಾರಿಗಳಿಗೆ ದೂರು ನೀಡಿದ್ದರಂತೆ ಆದರೆ ಯಾವುದೇ ಪ್ರಯೋಜನವಾಗದ ಹಿನ್ನೆಲೆ ಪೊಲೀಸರಿಗೆ ದೂರು ನೀಡಿದ್ದಾರೆ.