ನವದೆಹಲಿ:ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ ಪಕ್ಷದಿಂದ ಸ್ಪರ್ಧೆ ಮಾಡಿ ಗೆಲುವು ದಾಖಲಿಸಿರುವ ಮಾಜಿ ಕ್ರಿಕೆಟಿಗ ಮನೋಜ್ ತಿವಾರಿ ಇದೀಗ ಅಲ್ಲಿನ ಕ್ರೀಡಾ ಸಚಿವರಾಗಿ ಆಯ್ಕೆಯಾಗಿದ್ದಾರೆ.
ಮನೋಜ್ ತಿವಾರಿ ರಾಜಕೀಯ ಜೀವನ ಆರಂಭ ಮಾಡ್ತಿದ್ದಂತೆ ಟೀಂ ಇಂಡಿಯಾ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಟ್ವೀಟ್ ಮೂಲಕ ವಿಶ್ ಮಾಡಿದ್ದಾರೆ.
ಅಭಿನಂದನೆಗಳು... ನಿಮ್ಮ ವೃತ್ತಿ ಜೀವನದಲ್ಲಿ ನೀವು ಎದುರಿಸಿದ ಅಡೆತಡೆ ಯಾವುದೇ ಮಹತ್ವಾಕಾಂಕ್ಷಿ ಕ್ರಿಕೆಟಿಗನು ಅನುಭವಿಸದಿರಲಿ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ. ಅಂತಹ ಅದ್ಭುತ ಆಟಗಾರನಾದ ಬಳಿಕ ಕೂಡ ನೀವೂ ಅನೇಕ ತೊಂದರೆ ಅನುಭವಿಸಿದ್ದೀರಿ ಎಂದು ಟ್ವೀಟ್ ಮಾಡಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ವೇಳೆ ಮನೋಜ್ ತಿವಾರಿ ಶಿಬಪುರ್ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಇಲ್ಲಿ ಕಣಕ್ಕಿಳಿದಿದ್ದ ಬಿಜೆಪಿಯ ರತಿನ್ ಚಕ್ರವರ್ತಿ ವಿರುದ್ಧ 32 ಸಾವಿರಕ್ಕೂ ಅಧಿಕ ಮತ ಪಡೆದು ಜಯಗಳಿಸಿದ್ದರು. ಇದರ ಬೆನ್ನಲ್ಲೇ ಅವರಿಗೆ ಕ್ರೀಡಾ ಸಚಿವ ಸ್ಥಾನ ನೀಡಲಾಗಿದೆ.
ಇದನ್ನೂ ಓದಿ: ಪ. ಬಂಗಾಳ ಚುನಾವಣೆ : ಟಿಎಂಸಿ ಅಭ್ಯರ್ಥಿ ಕ್ರಿಕೆಟಿಗ ಮನೋಜ್ ತಿವಾರಿ ಭರ್ಜರಿ ಜಯ