ಕೇಪ್ಟೌನ್ (ದಕ್ಷಿಣ ಆಫ್ರಿಕಾ): ಮಹಿಳಾ T20 ವಿಶ್ವಕಪ್ ಸೆಮಿಫೈನಲ್ ಇಂದಿನ ಪಂದ್ಯದಲ್ಲಿ ಟಾಸ್ಗೆದ್ದ ಆಸ್ಟ್ರೇಲಿಯಾ ಭಾರತದ ವಿರುದ್ಧ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಇನ್ನು ಅನಾರೋಗ್ಯದಿಂದ ಬಳಲುತ್ತಿರುವ ವೇಗಿ ಪೂಜಾ ವಸ್ತ್ರಾಕರ್ ಇಂದಿನ ಪಂದ್ಯದಿಂದ ಹೊರಬಿದ್ದಿದ್ದಾರೆ. ಅಲ್ಲದೇ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಹರ್ಮನ್ ಪ್ರೀತ್ ಕೌರ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ನಾಯಕಿ ಸ್ಥಾನದಲ್ಲಿ ಪಂದ್ಯವನ್ನು ಮುನ್ನಡೆಸಲಿದ್ದಾರೆ.
ಮಹಿಳಾ T20 ಸೆಮಿಫೈನಲ್: ಟೀಂ ಇಂಡಿಯಾ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸೀಸ್ - Etv Bharat Kannada
ಅನಾರೋಗ್ಯ ಕಾರಣದಿಂದ ಇಂದಿನ ಆಸ್ಟ್ರೇಲಿಯಾ ವಿರುದ್ಧದ ಮಹತ್ವದ ಪಂದ್ಯದಿಂದ ಆಲ್‌ರೌಂಡರ್ ಪೂಜಾ ವಸ್ತ್ರಾಕರ್ ಹೊರಗುಳಿದಿದ್ದಾರೆ.
ಬುಧವಾರದಂದು ಹರ್ಮನ್ ಪ್ರೀತ್ ಕೌರ್, ಪೂಜಾ ವಸ್ತ್ರಾಕರ್ ಮತ್ತು ಎಡಗೈ ಸ್ಪಿನ್ನರ್ ರಾಧಾ ಯಾದವ್ ಸ್ಥಳೀಯ ಆಸ್ಪತ್ರೆಗೆ ತೆರಳಿ ಆರೋಗ್ಯದ ತಪಾಸಣೆಗೆ ಒಳಗಾಗಿದ್ದರು. ಈ ವೇಳೆ ಹರ್ಮನ್ ಪ್ರೀತ್ ಕೌರ್ ಜ್ವರದಿಂದ ಬಳಲಿದರೆ, ಪೂಜಾ ವಸ್ತ್ರಾಕರ್ ಜ್ವರದೊಂದಿಗೆ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಕಾರಣ ಸೆಮಿಫೈನಲ್ ಪಂದ್ಯದಿಂದ ಅವರನ್ನು ಕೈಬಿಡಲಾಗಿದೆ. ಪೂಜಾ ವಸ್ತ್ರಾಕರ್ ಸ್ಥಾನಕ್ಕೆ ಆಲ್‌ರೌಂಡರ್ ಸ್ನೇಹ ರಾಣ ಅವರನ್ನು ಆಯ್ಕೆ ಮಾಡಲಾಗಿದೆ. ಒಟ್ಟು 47 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಸ್ನೇಹ ರಾಣಾ, ಈ ಪೈಕಿ 24 ಟಿ20 ಪಂದ್ಯಗಳನ್ನು ಆಡಿದ್ದಾರೆ.
ಇದನ್ನೂ ಓದಿ:ಏಕದಿನ ಸರಣಿಗೆ ಆಸೀಸ್ ತಂಡ ಪ್ರಕಟ: ಗಾಯಾಳುಗಳಾದ ಮ್ಯಾಕ್ಸಿ, ಮಾರ್ಷ್, ರಿಚರ್ಡ್ಸನ್ ವಾಪಸ್