ಕರ್ನಾಟಕ

karnataka

ETV Bharat / bharat

ಹರಿಯಾಣದ ರೋಹ್ಟಕ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ.. ಒಂದೇ ಕುಟುಂಬದ ಏಳು ಮಂದಿಗೆ ಗಾಯ - ಈಟಿವಿ ಭಾರತ್ ಕನ್ನಡ ಸುದ್ದಿ

ಹರಿಯಾಣದ ರೋಹ್ಟಕ್‌ನಲ್ಲಿ ಬುಧವಾರ ಮುಂಜಾನೆ ನಗರದ ಏಕ್ತಾ ಕಾಲೋನಿ ಪ್ರದೇಶದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಏಳು ಜನರು ಗಾಯಗೊಂಡಿದ್ದಾರೆ.

ಹರಿಯಾಣದ ರೋಹ್ಟಕ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ
ಹರಿಯಾಣದ ರೋಹ್ಟಕ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ

By

Published : Oct 12, 2022, 10:14 PM IST

ರೋಹ್ಟಕ್:ಹರಿಯಾಣದ ರೋಹ್ಟಕ್‌ನ ಏಕ್ತಾ ಕಾಲೋನಿಯಲ್ಲಿ ಬುಧವಾರ ಬೆಳಗ್ಗೆ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ದಂಪತಿ ಮತ್ತು ಐದು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಕನಿಷ್ಠ ಏಳು ಸದಸ್ಯರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ಎರಡು ಅಂತಸ್ತಿನ ಮನೆಗೂ ಹಾನಿಯಾಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೃತರನ್ನು ವಿಶಾಲ್ ಕುಮಾರ್ ಮತ್ತು ಅವರ ಪತ್ನಿ ಅನುರಾಧ ಹಾಗೂ ಅವರ ಐವರು ಮಕ್ಕಳು ಎಂದು ಗುರುತಿಸಲಾಗಿದೆ.

ಮಾಹಿತಿ ಮೇರೆಗೆ ಅನುರಾಧ ಬೆಳಗ್ಗೆ ಎದ್ದು ಚಹಾ ತಯಾರಿಸಲು ಮುಂದಾದಾಗ ಈ ಘಟನೆ ನಡೆದಿದೆ. ನಂತರ ಅವರನ್ನು ರೋಹ್ಟಕ್ ಪಿಜಿಐಎಂಎಸ್‌ಗೆ ರವಾನಿಸಲಾಗಿದ್ದು, ಪ್ರಸ್ತುತ ಅನುರಾಧಾಳ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.

"ರೋಹ್ಟಕ್‌ನ ಏಕ್ತಾ ಕಾಲೋನಿಯಲ್ಲಿ ಇಂದು ಬೆಳಗ್ಗೆ ಸಿಲಿಂಡರ್ ಸ್ಫೋಟದಲ್ಲಿ ವಿವಾಹಿತ ದಂಪತಿಗಳು ಮತ್ತು ಅವರ ಐದು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಕುಟುಂಬದ ಎಲ್ಲ ಸದಸ್ಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ಟೆಂಡರ್‌ಗಳು ಮತ್ತು ಪೊಲೀಸರು ಸ್ಥಳಕ್ಕೆ ತಲುಪಿದ್ದಾರೆ" ಎಂದು ಶಿವಾಜಿ ಕಾಲೋನಿ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್​​ ಸಂಶೇರ್ ಸಿಂಗ್ ತಿಳಿಸಿದ್ದಾರೆ.

ಓದಿ:19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ABOUT THE AUTHOR

...view details