ಚಂಡೀಗಢ/ಹರಿಯಾಣ: ಕೆಲವು ಸಡಿಲಿಕೆಗಳೊಂದಿಗೆ ಹರಿಯಾಣ ಸರ್ಕಾರ ಲಾಕ್‌ಡೌನ್‌ನ ಜುಲೈ 5ರವರೆಗೆ ವಿಸ್ತರಿಸಿದೆ. ಜೂನ್ 28ರ ಬೆಳಗ್ಗೆ 5 ಗಂಟೆಯಿಂದ ಜುಲೈ 5ರ ಬೆಳಗ್ಗೆ 5ವರೆಗೆ ಒಂದು ವಾರ ಮತ್ತೆ ಲಾಕ್‌ಡೌನ್ ವಿಸ್ತರಣೆ ಮಾಡಿ ಆದೇಶಿಸಲಾಗಿದೆ. ವಿಪತ್ತು ನಿರ್ವಹಣಾ ಕಾಯ್ದೆ 2005ರ ಅನ್ವಯ ಈ ಆದೇಶ ಹೊರಡಿಸಲಾಗಿದೆ ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ವಿಜಯ್ ವರ್ಧನ್ ತಿಳಿಸಿದ್ದಾರೆ.
ಜುಲೈ 5 ರವರೆಗೆ ಕೊರೊನಾ ಲಾಕ್‌ಡೌನ್ ವಿಸ್ತರಿಸಿ ಹರಿಯಾಣ ಸರ್ಕಾರ ಆದೇಶ - ಸ್ವಿಮ್ಮಿಂಗ್ ಪೂಲ್
ಅಂಗಡಿಗಳು,ಮಾಲ್‌ಗಳು, ಧಾರ್ಮಿಕ ಸ್ಥಳಗಳನ್ನು ಈ ಹಿಂದಿನಂತೆ ಬೆಳಗ್ಗೆ 9ರಿಂದ ರಾತ್ರಿ 8ರವರೆಗೆ ತೆರೆಯಲು ಅನುಮತಿಸಲಾಗಿದೆ. ರೆಸ್ಟೋರೆಂಟ್ ಮತ್ತು ಬಾರ್ಗಳು ಬೆಳಗ್ಗೆ 10 ರಿಂದ ರಾತ್ರಿ 10 ರವರೆಗೆ ತೆರೆದಿರಲಿವೆ. ಸ್ವಿಮ್ಮಿಂಗ್ ಪೂಲ್ ಮತ್ತು ಸ್ಪಾಗಳನ್ನು ತೆರೆಯಲು ಅವಕಾಶ ನೀಡಿಲ್ಲ..
ರಾಜ್ಯದ ವಿಶ್ವವಿದ್ಯಾಲಯಗಳನ್ನು ತೆರೆಯಲು, ಸಂಶೋಧನಾ ವಿದ್ಯಾರ್ಥಿಗಳಿಗೆ ಪ್ರಯೋಗಾಲಯಗಳಲ್ಲಿ ಪ್ರಾಯೋಗಿಕ ತರಗತಿಗಳನ್ನು ನಡೆಸಲು ಅನುಮತಿ ನೀಡಿದೆ. ಆದರೆ, ಕೋವಿಡ್ ನಿಯಮ ಪಾಲನೆ ಕಡ್ಡಾಯಗೊಳಿಸಿದೆ. ಕೊರೊನಾ ವೈರಸ್ ಲಾಕ್‌ಡೌನ್ 'ಮಹಾಮಾರಿ ಅಲರ್ಟ್-ಸುರಕ್ಷಿತ್ ಹರಿಯಾಣ (Epidemic Alert-Safe Haryana)' ಎಂದು ರಾಜ್ಯ ಸರ್ಕಾರ ಹೇಳಿದೆ. ಇನ್ನು, ಅಂಗನವಾಡಿ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಿಲ್ಲ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುವ ಇತರೆ ಇಲಾಖೆಗಳಲ್ಲಿ ಜುಲೈ 31ರವರೆಗೆ ಲಾಕ್‌ಡೌನ್ ಮುಂದುವರಿಸಲು ಆದೇಶಿಸಲಾಗಿದೆ.
ಅಂಗಡಿಗಳು,ಮಾಲ್‌ಗಳು, ಧಾರ್ಮಿಕ ಸ್ಥಳಗಳನ್ನು ಈ ಹಿಂದಿನಂತೆ ಬೆಳಗ್ಗೆ 9ರಿಂದ ರಾತ್ರಿ 8ರವರೆಗೆ ತೆರೆಯಲು ಅನುಮತಿಸಲಾಗಿದೆ. ರೆಸ್ಟೋರೆಂಟ್ ಮತ್ತು ಬಾರ್ಗಳು ಬೆಳಗ್ಗೆ 10 ರಿಂದ ರಾತ್ರಿ 10 ರವರೆಗೆ ತೆರೆದಿರಲಿವೆ. ಸ್ವಿಮ್ಮಿಂಗ್ ಪೂಲ್ ಮತ್ತು ಸ್ಪಾಗಳನ್ನು ತೆರೆಯಲು ಅವಕಾಶ ನೀಡಿಲ್ಲ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಕಡಿಮೆಯಾಗುತ್ತಿದೆ ಆದರೂ ಮುನ್ನೆಚ್ಚರಿಕಾ ಕ್ರಮವಾಗಿ ಇನ್ನೂ ಒಂದು ವಾರಗಳ ಕಾಲ ಲಾಕ್‌ಡೌನ್ ವಿಸ್ತರಿಸಿರುವುದಾಗಿ ರಾಜ್ಯ ಸರ್ಕಾರ ಹೇಳಿದೆ.