ಚಂಡೀಗಢ: ಹರಿಯಾಣ ಸರ್ಕಾರವು ಅಸ್ತಿತ್ವದಲ್ಲಿರುವ ಅಬಕಾರಿ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಮದ್ಯಸೇವನೆ ವಯಸ್ಸನ್ನು 25 ವರ್ಷದಿಂದ 21 ವರ್ಷಕ್ಕೆ ಇಳಿಸಿದೆ. ಹರಿಯಾಣ ವಿಧಾನಸಭೆಯು ಚಳಿಗಾಲದ ಅಧಿವೇಶನದ ಕೊನೆಯ ದಿನವಾದ ಬುಧವಾರ ಹರಿಯಾಣ ಅಬಕಾರಿ (ತಿದ್ದುಪಡಿ)- 2021 ಮಸೂದೆಯನ್ನು ಅಂಗೀಕರಿಸಲಾಗಿದೆ.
ಈ ಹಿಂದೆ ಹರಿಯಾಣದಲ್ಲಿ 25 ವರ್ಷಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿಗೆ ಮದ್ಯ ಖರೀದಿಸಲು ಅಥವಾ ಮಾರಾಟ ಮಾಡಲು ಅವಕಾಶವಿರಲಿಲ್ಲ. ಈ ಕಾಯ್ದೆಯ ತಿದ್ದುಪಡಿಯಿಂದಾಗಿ 21 ವರ್ಷ ಮೇಲ್ಪಟ್ಟವರು ಮದ್ಯ ಖರೀದಿಸಲು, ಮಾರಾಟ ಮಾಡಲು ಮತ್ತು ಸೇವನೆಗೆ ಅವಕಾಶ ಕಲ್ಪಿಸಲಾಗಿದೆ.
2021-22ನೇ ಸಾಲಿಗೆ ಅಬಕಾರಿ ನೀತಿಯನ್ನು ರೂಪಿಸುವ ಸಮಯದಲ್ಲಿ, ಕೆಲವು ರಾಜ್ಯಗಳು ಕಡಿಮೆ ವಯಸ್ಸನ್ನು ಸೂಚಿಸಿರುವ ಕಾರಣದಿಂದ ವಯಸ್ಸಿನ ಮಿತಿಯನ್ನು 25 ವರ್ಷದಿಂದ 21 ವರ್ಷಕ್ಕೆ ಇಳಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ.