ನವದೆಹಲಿ:ಟೋಕಿಯೋ ಒಲಿಂಪಿಕ್ಸ್ನ ಹಾಕಿ ಸ್ಪರ್ಧೆಯಲ್ಲಿ ಭಾರತೀಯ ವನಿತೆಯರ ಅತ್ಯದ್ಭುತ ಆಟಕ್ಕೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಹಾಕಿ ತಂಡಕ್ಕೆ ವಿವಿಧ ಕ್ಷೇತ್ರಗಳ ಗಣ್ಯರೆಲ್ಲರೂ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಪದಕ ಗೆಲ್ಲುವಲ್ಲಿ ವಿಫಲವಾದರೂ ಮಹಿಳಾ ತಂಡದ ಸಾಧನೆಗೆ ಹರಿಯಾಣ ಸರ್ಕಾರ ಮೆಚ್ಚುಗೆ ವ್ಯಕ್ತಪಡಿಸಿದ್ದು, ಹರಿಯಾಣದಿಂದ ಹಾಕಿ ತಂಡಕ್ಕೆ ಆಯ್ಕೆಯಾದ 9 ಮಂದಿಗೆ ತಲಾ 50 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಸಿಎಂ ಮನೋಹರ್ ಲಾಲ್ ಕಟ್ಟರ್ ಘೋಷಿಸಿದ್ದಾರೆ.
ಟೋಕಿಯೋ ಒಲಿಂಪಿಕ್ಸ್ನಲ್ಲಿ ಅಭಿನಂದನಾರ್ಹ ಆಟವನ್ನು ಆಡಿದ ಮಹಿಳಾ ತಂಡಕ್ಕೆ ಶುಭಾಶಯಗಳು ಎಂದು ಸಿಎಂ ಮನೋಹರ್ ಲಾಲ್ ಕಟ್ಟರ್ ಟ್ವೀಟ್ ಮಾಡಿದ್ದು, ಇದೇ ವೇಳೆ ತಲಾ 50 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ.