ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಹಾಗೂ ಪುತ್ರ ಕಾರ್ತಿ ಸಂಬಂಧ ಕೆಳ ನ್ಯಾಯಾಲಯ ನಡೆಸುತ್ತಿರುವ ವಿಚಾರಣೆಗೆ ದೆಹಲಿ ಹೈಕೋರ್ಟ್ ತಡೆ ನೀಡಿದೆ.
ಐಎನ್‌ಎಕ್ಸ್ ಮೀಡಿಯಾ ಪ್ರಕರಣ: ಕೆಳ ನ್ಯಾಯಾಲಯದ ವಿಚಾರಣೆ ತಡೆಹಿಡಿದ ಹೈಕೋರ್ಟ್ - ಕೆಳ ನ್ಯಾಯಾಲಯದ ವಿಚಾರಣೆ ತಡೆಹಿಡಿದ ಹೈಕೋರ್ಟ್
ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಭಾಗಿಯಾಗಿದ್ದಾರೆ ಎನ್ನಲಾದ ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದ ಕೆಳ ನ್ಯಾಯಾಲಯದ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ತಡೆ ಹಿಡಿದಿದೆ.
![ಐಎನ್‌ಎಕ್ಸ್ ಮೀಡಿಯಾ ಪ್ರಕರಣ: ಕೆಳ ನ್ಯಾಯಾಲಯದ ವಿಚಾರಣೆ ತಡೆಹಿಡಿದ ಹೈಕೋರ್ಟ್ hc-stays-trial-court-proceedings-in-inx-media-corruption-case-involving-chidambaram-others](https://etvbharatimages.akamaized.net/etvbharat/prod-images/768-512-05:08:50:1621337930-11801329-895-11801329-1621326360693.jpg)
ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟ್ ಅವರು ನೋಟಿಸ್ ಜಾರಿಗೊಳಿಸಿದ್ದಾರೆ. ಆರೋಪಿಗಳಿಗೆ ದಾಖಲೆಗಳನ್ನು ಪೂರೈಸುವಂತೆ ಕೆಳ ನ್ಯಾಯಾಲಯ ನಿರ್ದೇಶನ ನೀಡಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಮನವಿಯಲ್ಲಿ ಚಿದಂಬರಂ ಮತ್ತು ಇತರರಿಂದ ಪ್ರತಿಕ್ರಿಯೆ ಕೋರಲಾಗಿದೆ.
ಚಿದಂಬರಂ ಅವರು ಹಣಕಾಸು ಸಚಿವರಾಗಿದ್ದ ಸಂದರ್ಭದಲ್ಲಿ, ವಿದೇಶಿ ಬಂಡವಾಳ ಉತ್ತೇಜನಾ ಮಂಡಳಿಯು 305 ಕೋಟಿ ವಿದೇಶಿ ಹೂಡಿಕೆ ಸ್ವೀಕರಿಸಲು ಐಎನ್‌ಎಕ್ಸ್ ಮೀಡಿಯಾಕ್ಕೆ ಅನುಮತಿ ನೀಡಿತ್ತು. ಈ ರೀತಿ ಅನುಮತಿ ನೀಡುವ ವೇಳೆ ಭಾರಿ ಅವ್ಯವಹಾರ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ 2017ರಲ್ಲಿ ಸಿಬಿಐ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿತ್ತು. ಇದಾದ ನಂತರ ಮನಿ ಲ್ಯಾಂಡರಿಂಗ್ ಪ್ರಕರಣ ಕೂಡ ದಾಖಲಾಗಿತ್ತು.