ನವದೆಹಲಿ:ಸಂಸತ್ ಚಳಿಗಾಲದ ಅಧಿವೇಶನದ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರಿಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಆತ್ಮೀಯವಾಗಿ ಬರಮಾಡಿಕೊಂಡು ಕೆಲಹೊತ್ತು ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಪ್ರಧಾನಿ ಮೋದಿಯವರೇ ಖುದ್ದಾಗಿ ದೇವೇಗೌಡರ ಕೈ ಹಿಡಿದು, ಅವರನ್ನು ಕುರ್ಚಿಯಲ್ಲಿ ಕೂರಿಸಿದರು. ಇದರ ಕೆಲವು ಫೋಟೋಗಳನ್ನು ಶೇರ್ ಮಾಡಿದ್ದು, ಸಂಸತ್ನಲ್ಲಿ ದೇವೇಗೌಡರನ್ನು ಭೇಟಿಯಾಗಿ ಬಹಳ ಸಂತೋಷವಾಯಿತು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ದೇವೇಗೌಡರ ಬಗ್ಗೆ ಪ್ರಧಾನಿ ಮೋದಿ ಈ ಹಿಂದಿನಿಂದಲೂ ಅಪಾರವಾದ ಪ್ರೀತಿ, ಗೌರವ ಇಟ್ಟುಕೊಂಡಿದ್ದಾರೆ. ಇದಕ್ಕೆ ಉಭಯ ನಾಯಕರ ಭೇಟಿಯ ಕೆಲವು ಫೋಟೋಗಳೇ ಸಾಕ್ಷಿಯಾಗಿವೆ.