ಬಾರ್ಮೆರ್(ರಾಜಸ್ಥಾನ): ಬಾರ್ಮೆರ್-ಜೋಧ್ಪುರ ಹೆದ್ದಾರಿಯಲ್ಲಿ (Barmer-Jodhpur national highway) ಬಸ್ ಮತ್ತು ಟ್ರಕ್ ಮಧ್ಯೆ ಭೀಕರ ರಸ್ತೆ ಅಪಘಾತ ನಡೆದಿದ್ದು, ಇಡೀ ಬಸ್ ಹೊತ್ತಿ ಉರಿದ ಘಟನೆ ನಡೆದಿದೆ. ಪರಿಣಾಮ, 12 ಮಂದಿ ದಾರುಣವಾಗಿ ಸಾವಿಗೀಡಾಗಿದ್ದಾರೆ.
ಈ ಘಟನೆಯಲ್ಲಿ ಗಾಯಗೊಂಡವರನ್ನು ಖಾಸಗಿ ವಾಹನಗಳ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಗೆ ಹೊತ್ತಿಕೊಂಡ ಬೆಂಕಿ ನಂದಿಸಲು ಅಲ್ಲಿ ನೆರೆದಿದ್ದ ಜನರು ಹರಸಾಹಸಪಟ್ಟರು.