ನವದೆಹಲಿ: ಬ್ರಿಟನ್ ಹಾಗೂ ಯುರೋಪಿಯನ್ ದೇಶಗಳಲ್ಲಿ ಕೊರೊನಾ ಸೋಂಕು ತೀವ್ರತೆ ಪಡೆದುಕೊಳ್ಳುತ್ತಿದ್ದು, ಮತ್ತೆ ಹೊಸ ವೈರಸ್ ಸಹ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯವು ಇಂದು ಮಹತ್ವದ ಸಭೆ ನಡೆಸಲಿದೆ.
ಯುಕೆಯಲ್ಲಿ ಹೆಚ್ಚಿದ ಕೊರೊನಾ ತೀವ್ರತೆ : ತುರ್ತು ಸಭೆ ಕರೆದ ಕೇಂದ್ರ ಆರೋಗ್ಯ ಸಚಿವಾಲಯ - ಕೊರೊನಾ ವೈರಸ್ ಸುದ್ದಿ 2020
ಯುರೋಪಿಯನ್ ದೇಶಗಳಲ್ಲಿ ಕೊರೊನಾ ಸೋಂಕು ತೀವ್ರತೆ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯವು ಇಂದು ಮಹತ್ವದ ಸಭೆ ನಡೆಸಲಿದೆ.

ಕೇಂದ್ರ ಆರೋಗ್ಯ ಸಚಿವಾಲಯಕೇಂದ್ರ ಆರೋಗ್ಯ ಸಚಿವಾಲಯ
ಆರೋಗ್ಯ ಸೇವೆಗಳ ಮಹಾನಿರ್ದೇಶಕರ (ಡಿಜಿಹೆಚ್‌ಎಸ್) ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಲಿದ್ದು, ಬ್ರಿಟನ್ ಹಾಗೂ ಯುರೋಪಿಯನ್ ದೇಶಗಳಲ್ಲಿ ಕೊರೊನಾ ಸೋಂಕು ಏರಿಕೆಗೆ ಕಾರಣವೇನು ಎಂಬ ಕುರಿತು ಚರ್ಚೆ ನಡೆಸಲಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿಗಳು ಈ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
"ಭಾರತದಲ್ಲಿ ಕೊರೊನಾ ತೀವ್ರಗತಿಯಲ್ಲಿ ಏರಿಕೆ ಕಂಡಿಲ್ಲ. ಆದರೆ ನಾವು ಜಗತ್ತಿಗೆ ಸಂಬಂಧಿಸಿದ ಯಾವುದೇ ಘಟನೆಗಳ ಬಗ್ಗೆ ನಿಗಾ ಇಡುತ್ತೇವೆ"ಎಂದು ಅಧಿಕಾರಿಗಳು ಹೇಳಿದರು.